ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಸಂಸ್ಥೆ, ವ್ಯಕ್ತಿಗಳಿಗೆ ಪ್ರಶಸ್ತಿ: ಅರ್ಜಿ ಆಹ್ವಾನ
ಮಂಗಳೂರು: ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಸಂಸ್ಥೆಗಳಿಗೆ, ವಿಶೇಷ ಶಿಕ್ಷಕರಿಗೆ ಮತ್ತು ವೈಯಕ್ತಿಕ ಪ್ರಶಸ್ತಿಗಳನ್ನು ರಾಜ್ಯ ಮಟ್ಟದಲ್ಲಿ ಇಲಾಖಾ ಸಚಿವರ ಅಧ್ಯಕ್ಷತೆಯಲ್ಲಿನ ಸಮಿತಿಯಲ್ಲಿ ಆಯ್ಕೆ ಮಾಡಿ “ವಿಶ್ವ ಡಿಸೆಂಬರ್ 3 ರಂದು ನಡೆಯುವ ವಿಕಲಚೇತನರ ದಿನಾಚರಣೆಯಂದು ಪ್ರಶಸ್ತಿಗಳನ್ನು ನೀಡಲು ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯನ್ನು ಅರ್ಹ ಅಭ್ಯರ್ಥಿಗಳು ನಗರದ ಕೊಟ್ಟಾರ ಜಿಲ್ಲಾ ಪಂಚಾಯತ್ ಕಟ್ಟಡಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಛೇರಿಯಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು ನವೆಂಬರ್ 7 ರೊಳಗೆ ಕಛೇರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಕಛೇರಿಯ ದೂರವಾಣಿ ಸಂಖ್ಯೆ: 0824-2455999 ಯನ್ನು ಸಂಪರ್ಕಿಸಬಹುದು ಎಂದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













