Home Mangalorean News Kannada News ವಿಕಲ ಚೇತನರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಕಾರ – ಯಶ್ಪಾಲ್ ಸುವರ್ಣ

ವಿಕಲ ಚೇತನರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಕಾರ – ಯಶ್ಪಾಲ್ ಸುವರ್ಣ

Spread the love

ವಿಕಲ ಚೇತನರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಕಾರ – ಯಶ್ಪಾಲ್ ಸುವರ್ಣ

ಉಡುಪಿ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಫಲಾನುಭವಿಗಳಿಗೆ ವಿವಿಧ ಯೋಜನೆಯ ಸವಲತ್ತುಗಳನ್ನು ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ವಿತರಿಸಿದರು.

ಅರ್ಹ ಫಲಾನುಭವಿಗಳಿಗೆ ಕೃತಕ ಕಾಲು, ಅಂಧ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಾಗೂ ವಿಕಲ ಚೇತನ ವ್ಯಕ್ತಿಗಳ ವಿವಾಹ ಪ್ರೋತ್ಸಾಹ ಧನದ ಬಾಂಡ್ ಗಳನ್ನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಯಶ್ಪಾಲ್ ಸುವರ್ಣ ರಾಜ್ಯ ಹಾಗೂ ಕೇಂದ್ರ ಸರಕಾರ ವಿಶೇಷ ಚೇತನ ವ್ಯಕ್ತಿಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ರೂಪಿಸಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಮೂಲಕ ವಿಕಲ ಚೇತನರನ್ನು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ವಿಶೇಷ ಸಹಕಾರ ನೀಡಲು ಆದ್ಯತೆ ವಹಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಉಡುಪಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯ ನಾಯ್ಕ್, ಅಂಗವಿಕಲ ಕಲ್ಯಾಣಾಧಿಕಾರಿ ರತ್ನ, ಗ್ರಾಮ ಪಂಚಾಯತ್ ಸದಸ್ಯರಾದ ಆದರ್ಶ ಶೆಟ್ಟಿ ಕೆಂಜೂರು ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

Exit mobile version