ವಿಜಯ ಬ್ಯಾಂಕ್ ವಿಲೀನಕ್ಕೆ ಕೇಂದ್ರ ಸರಕಾರ ಮುಂದಾದರೆ ಉಪವಾಸ ಸತ್ಯಾಗ್ರಹ- ಐವನ್ ಡಿಸೋಜಾ

Spread the love

ವಿಜಯ ಬ್ಯಾಂಕ್ ವಿಲೀನಕ್ಕೆ ಕೇಂದ್ರ ಸರಕಾರ ಮುಂದಾದರೆ ಉಪವಾಸ ಸತ್ಯಾಗ್ರಹ- ಐವನ್ ಡಿಸೋಜಾ

ಮಂಗಳೂರು:ವಿಜಯ ಬ್ಯಾಂಕ್ ದಕ್ಷಿಣ ಕನ್ನಡ ಜಿಲ್ಲೆಯ ಗೌರವದ ಪ್ರತೀಕವಾಗಿದ್ದು ಈ ಬ್ಯಾಂಕನ್ನು ಇತರ ಬ್ಯಾಂಕುಗಳ ಜೊತೆ ವಿಲೀನಗೊಳಿಸುವ ಪ್ರಸ್ತಾಪವನ್ನು ಕೇಂದ್ರ ಸರಕಾರ ಮುಂದುವರೆಸಿದರೆ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಕೂರುವುದಾಗಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಎಚ್ಚರಿಕೆ ನೀಡಿದ್ದಾರೆ.

ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶಗಳಲ್ಲಿ ವಿಜಯಾ ಬ್ಯಾಂಕ್ ಅತೀ ಹೆಚ್ಚು ಶಾಖೆಗಳನ್ನು ಹೊಂದಿದ್ದು, ರೈತರು ಕೂಲಿಕಾರ್ಮಿಕರು ಜನಸಾಮಾನ್ಯರ ಪಾಲಿನ ಆಶಾಕಿರಣವಾದ ವಿಜಯ ಬ್ಯಾಂಕನ್ನು ಬ್ಯಾಂಕ್ ಆಫ್ ಬರೋಡ ಹಾಗೂ ದೇನಾ ಬ್ಯಾಂಕ್ ಜತೆ ವಿಲೀನಗೊಳಿಸುವ ಕೇಂದ್ರ ವಿತ್ತ ಸಚಿವಾಲಯ ತನ್ನ ನಿರ್ಧಾರವನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು.

2129 ಶಾಖೆಗಳನ್ನು ಹೊಂದಿರುವ ವಿಜಯ ಬ್ಯಾಂಕಿನ 79 ಶಾಖೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಗೂ ಉಡುಪಿ ಜಿಲ್ಲೆಯಲ್ಲಿ 63 ಸೇರಿ ಕರ್ನಾಟಕದಲ್ಲಿ ಒಟ್ಟು 583 ಶಾಖೆಗಳನ್ನು ವಿಜಯಾಬ್ಯಾಂಕ್ ಹೊಂದಿದೆ. ಇದು ದಕ್ಷಿಣ ಕನ್ನಡ ಜಿಲ್ಲೆಯ ಪ್ರತೀಕದ ಸಂಕೇತ. ಭಾವನಾತ್ಮಕ ಸಂದಭಂದವನ್ನು ಹೊಂದಿರುವ ೀ ಬ್ಯಾಂಕಿನ ವಿಲೀನಕ್ಕೆ ಕೇಂದ್ರ ಸಕರಕಾರ ಕೈ ಹಾಕಿದರೆ ಅದರ ಪರಿಣಾಂವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು


Spread the love