Home Mangalorean News Kannada News ವಿಟ್ಲದಲ್ಲಿ ಅಕ್ರಮ ಪಡಿತರ ಅಕ್ಕಿ ದಾಸ್ತಾನು ಪತ್ತೆ: ಆರೋಪಿಯ ವಿರುದ್ಧ ಪ್ರಕರಣ ದಾಖಲು

ವಿಟ್ಲದಲ್ಲಿ ಅಕ್ರಮ ಪಡಿತರ ಅಕ್ಕಿ ದಾಸ್ತಾನು ಪತ್ತೆ: ಆರೋಪಿಯ ವಿರುದ್ಧ ಪ್ರಕರಣ ದಾಖಲು

Spread the love

ವಿಟ್ಲದಲ್ಲಿ ಅಕ್ರಮ ಪಡಿತರ ಅಕ್ಕಿ ದಾಸ್ತಾನು ಪತ್ತೆ: ಆರೋಪಿಯ ವಿರುದ್ಧ ಪ್ರಕರಣ ದಾಖಲು

ವಿಟ್ಲ: ಬಂಟ್ವಾಳ ತಾಲೂಕಿನ ಆಹಾರ ನಿರೀಕ್ಷಕರಾದ ಎ. ಪ್ರಶಾಂತ ಶೆಟ್ಟಿ (47) ಅವರಿಗೆ ಮೇ 9, 2026ರಂದು ಬೆಳಿಗ್ಗೆ ವಿಟ್ಲ ಕಸಬಾ ಗ್ರಾಮದ ಶಿವಾಜಿ ನಗರದಲ್ಲಿ ಅಟೋರಿಕ್ಷಾವೊಂದರಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇಡಲಾಗಿದೆ ಎಂಬ ಮಾಹಿತಿ ಲಭಿಸಿತ್ತು.

ಮಾಹಿತಿಯ ಮೇರೆಗೆ ಆಹಾರ ಇಲಾಖೆಯ ಸಿಬ್ಬಂದಿ ಹಾಗೂ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ರಾಮಕೃಷ್ಣ ಮತ್ತು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದ ವೇಳೆ, ಮನೆಯೊಂದರ ಅಂಗಳದಲ್ಲಿ ಕೆಎ-70-ಎ-2034 ಸಂಖ್ಯೆಯ ಅಟೋರಿಕ್ಷಾದಲ್ಲಿ 15 ಚೀಲ ಪಡಿತರ ಅಕ್ಕಿಯನ್ನು ತುಂಬಿರುವುದು ಪತ್ತೆಯಾಯಿತು.

ಈ ಕುರಿತು ಸ್ಥಳದಲ್ಲಿದ್ದ ವಿಟ್ಲ ಕಸಬಾ ಗ್ರಾಮದ ನಿವಾಸಿ ಅಲಿ ಅಕ್ಬರ್ (40) ಎಂಬಾತನಲ್ಲಿ ವಿಚಾರಣೆ ನಡೆಸಿದಾಗ, ಆತನೇ ಅಕ್ಕಿ ಚೀಲಗಳನ್ನು ಅಕ್ರಮವಾಗಿ ದಾಸ್ತಾನು ಇಟ್ಟುಕೊಂಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪರಿಶೀಲನೆ ವೇಳೆ 15 ಪ್ಲಾಸ್ಟಿಕ್ ಚೀಲಗಳಲ್ಲಿ ಒಟ್ಟು 679.38 ಕೆಜಿ ತೂಕದ ಪಡಿತರ ಅಕ್ಕಿ ಪತ್ತೆಯಾಗಿದ್ದು, ಇದರ ಅಂದಾಜು ಮೌಲ್ಯ ₹23,098 ಎಂದು ತಿಳಿದುಬಂದಿದೆ.

ಸ್ವಾಧೀನಪಡಿಸಿಕೊಂಡ ಅಕ್ಕಿ ಹಾಗೂ ಅಟೋರಿಕ್ಷಾವನ್ನು ಮುಂದಿನ ಕಾನೂನು ಕ್ರಮಕ್ಕಾಗಿ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 103/2026ರಡಿ ಅವಶ್ಯಕ ವಸ್ತುಗಳ ಕಾಯ್ದೆ 1955ರ ಕಲಂ 3 ಮತ್ತು 7 ಹಾಗೂ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣ ಆದೇಶ 2016ರ ಕಲಂ 18ರಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


Spread the love

Exit mobile version