ವಿಟ್ಲ| ಅಕ್ರಮ ಸ್ಫೋಟಕ ಸಂಗ್ರಹ: ವ್ಯಕ್ತಿ ಬಂಧನ

Spread the love

ವಿಟ್ಲ| ಅಕ್ರಮ ಸ್ಫೋಟಕ ಸಂಗ್ರಹ: ವ್ಯಕ್ತಿ ಬಂಧನ

ವಿಟ್ಲ: ಮನೆಯ ಆವರಣದಲ್ಲಿ ಯಾವುದೇ ಮುನ್ನೆಚ್ಚರಿಕೆ ವಹಿಸದೆ ಅಕ್ರಮವಾಗಿ ಸ್ಫೋಟಕ ಸಾಮಗ್ರಿಗಳನ್ನು ಸಂಗ್ರಹಿಸಿ ಸುಡುಮದ್ದು ತಯಾರಿಸುತ್ತಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕಂಬಳಬೆಟ್ಟು ಬಳಿಯ ಅಮೈ ನಿವಾಸಿ ಜಗದೀಶ ಪೂಜಾರಿ ಎಂದು ಗುರುತಿಸಲಾಗಿದೆ. ಏಪ್ರಿಲ್ 13ರಂದು ರಾತ್ರಿ ಜಗದೀಶ ಅವರು ತಮ್ಮ ಮನೆಯ ಆವರಣದಲ್ಲಿ ಸ್ಫೋಟಕ ವಸ್ತುಗಳನ್ನು ದಾಸ್ತಾನು ಮಾಡಿರುವ ಕುರಿತು ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು.

ಈ ಹಿನ್ನೆಲೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಬಿ.ಎಸ್. ನಾಯಕ್ ನೇತೃತ್ವದ ತಂಡ ಸ್ಥಳಕ್ಕೆ ದಾಳಿ ನಡೆಸಿದ ವೇಳೆ ಸುಮಾರು 1.9 ಕೆ.ಜಿ ತೂಕದ ಸಂಶಯಾಸ್ಪದ ಸ್ಫೋಟಕ ವಸ್ತುಗಳನ್ನು ಪತ್ತೆಹಚ್ಚಲಾಗಿದೆ.

ಜನವಸತಿ ಪ್ರದೇಶದಲ್ಲಿ ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ಅಪಾಯಕಾರಿ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿದ್ದ ಹಿನ್ನೆಲೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 93/2026ರಂತೆ ಸ್ಫೋಟಕ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments