Home Mangalorean News Kannada News ವಿಟ್ಲ ಪೊಲೀಸರಿಂದ ಅಕ್ರಮ ಮರಳು ಅಡ್ಡೆಗೆ ದಾಳಿ, ಸೊತ್ತು ವಶ

ವಿಟ್ಲ ಪೊಲೀಸರಿಂದ ಅಕ್ರಮ ಮರಳು ಅಡ್ಡೆಗೆ ದಾಳಿ, ಸೊತ್ತು ವಶ

Spread the love

ವಿಟ್ಲ ಪೊಲೀಸರಿಂದ ಅಕ್ರಮ ಮರಳು ಅಡ್ಡೆಗೆ ದಾಳಿ, ಸೊತ್ತು ವಶ

ಮಂಗಳೂರು: ಬಂಟ್ವಾಳ, ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಎಂಬಲ್ಲಿ, ಆರೋಪಿತನಾದ ಅಬ್ದುಲ್‌ ಸಮದ್‌ ಎಂಬಾತನು ಹೊಳೆಯಿಂದ ಯಂತ್ರದ ಮೂಲಕ ಮರಳನ್ನು ಅಕ್ರಮವಾಗಿ ತೆಗೆದು ಸಂಗ್ರಹಿಸಿಟ್ಟಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ವಿಟ್ಲ ಪೊಲೀಸ್‌ ಠಾಣಾ ಪೊಲಿಸ್‌ ಉಪ ನಿರೀಕ್ಷಕರಾದ ರತ್ನಕುಮಾರ್‌ ರವರು ಸಿಬ್ಬಂದಿಗಳೊಂದಿಗೆ ತೆರಳಿ ಪರಿಶೀಲಿಸಿದಾಗ, ಕೇರಳ ಗಡಿಭಾಗದಿಂದ ಅಂದಾಜು ಒಂದು ಕಿ.ಮೀ ದೂರದ ಸಾಲೆತ್ತೂರು ಕಟ್ಟತ್ತಿಲ ಹೊಳೆಯ ಸೇತುವೆ ಬಳಿ, ಸುಮಾರು 2 ರಿಂದ 3 ಪಿಕಪ್‌ ನಷ್ಟು ಮರಳು ಮತ್ತು ಹೊಳೆಯಿಂದ ಮರಳನ್ನು ತೆಗೆಯಲು ಉಪಯೋಗಿಸುತ್ತಿದ್ದ ಯಂತ್ರ, ಕಬ್ಬಿನದ ಜಾಲರಿ, ಪೈಬರ್‌ ಬುಟ್ಟಿಗಳು, ಕಬ್ಬಿಣದ ಹಾರೆ ಹಾಗೂ ಕೃತ್ಯಕ್ಕೆ ಬಳಸಿದ ಇತರೆ ಸೊತ್ತುಗಳು ಕಂಡುಬಂದಿದ್ದು, ಸದ್ರಿ ಸೊತ್ತುಗಳನ್ನು ಸ್ವಾಧೀನಪಡಿಸಿ, ವಿಟ್ಲ ಪೊಲೀಸ್ ಠಾಣೆಯಲ್ಲಿ ಅಕ್ರ:93/2025 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ‌ ನಡೆಸಲಾಗುತ್ತಿದೆ.


Spread the love

Exit mobile version