ವಿಟ್ಲ: ಮಹಿಳೆಯೊಂದಿಗೆ ಅನುಚಿತ ವರ್ತನೆ ತೋರಿದ ವ್ಯಕ್ತಿ – ಪ್ರಕರಣ ದಾಖಲು
ಮಂಗಳೂರು: ಪ್ರಕರಣದ ಪಿರ್ಯಾದಿದಾರರಾದ ಸಂತ್ರಸ್ತ ಮಹಿಳೆಯು ದಿನಾಂಕ:03-09-2025 ರಂದು ಸಂಜೆ, ದ್ವಿಚಕ್ರ ವಾಹನದಲ್ಲಿ ತನ್ನ ಮಗನನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಬರುತ್ತಾ, ಮನೆಯ ಸಮೀಪ ತಲುಪುತ್ತಿದ್ದಂತೆ, ಆರೋಪಿ ಅಶ್ರಫ್ ಎಂಬಾತನು ಕತ್ತಿಯನ್ನು ಹಿಡಿದುಕೊಂಡು ಬಂದು ಸ್ಕೂಟರಿನಲ್ಲಿದ್ದ ಪಿರ್ಯಾದಿದಾರರೊಂದಿಗೆ ಅನುಚಿತವಾಗಿ ವರ್ತಿಸಿ, ಕತ್ತಿಯಿಂದ ಹಲ್ಲೆಗೆ ಯತ್ನಿಸಿರುತ್ತಾನೆ.
ಈ ವೇಳೆ ಪಿರ್ಯಾದಿದಾರರ ಬೆರಳುಗಳಿಗೆ ತೀವ್ರ ಸ್ವರೂಪದ ರಕ್ತಗಾಯವಾಗಿರುತ್ತದೆ. ಈ ವೇಳೆ ಬೊಬ್ಬೆ ಕೇಳಿ ಪಿರ್ಯಾದಿರವರ ತಾಯಿ ಹಾಗೂ ನೆರೆಕೆರೆಯವರು ಓಡಿ ಬರುತ್ತಿರುವುದನ್ನು ಕಂಡು ಆರೋಪಿಯು ಪಿರ್ಯಾದಿದಾರರಿಗೆ ಜೀವ ಬೆದರಿಕೆ ಹಾಕಿ ತೆರಳಿರುತ್ತಾನೆ. ಹಲ್ಲೆಯಿಂದಾದ ಗಾಯಗಳಿಗೆ ಪಿರ್ಯಾದಿರವರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 113/2025, ಕಲಂ : 74, 109, 118(1), 351(2) ಬಿ ಎನ್ ಎಸ್ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.