Home Mangalorean News Kannada News ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ : ಬೆಂಕಿಗಾಹುತಿ

ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ : ಬೆಂಕಿಗಾಹುತಿ

Spread the love

ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ : ಬೆಂಕಿಗಾಹುತಿ

ಮಂಗಳೂರು: ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಮಗುಚಿ ಬಿದ್ದ ಪರಿಣಾಮ ಬೆಂಕಿಗಾಹುತಿಯಾದ ಘಟನೆ ಗುರುವಾರ ಗೋಳಿತೊಟ್ಟು ಎಂಬಲ್ಲಿ ನಡೆದಿದೆ.

ಮಂಗಳೂರು – ಬೆಂಗಳೂರು ರಾಷ್ಟ್ರಿಯ ಹೆದ್ದಾರಿಯಲ್ಲಿ ಲಾರಿಯೊಂದು ಮಂಗಳೂರು ಕಡೆಗೆ ಚಲಿಸುತ್ತಿದ್ದ ವೇಳೆ ಗೋಳಿತೊಟ್ಟು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆಯ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು ವಿದ್ಯುತ್ ಕಂಬ ತುಂಡಾಗಿ ಲಾರಿಯ ಮೇಲೆ ಬಿದ್ದಿದ್ದು, ಪರಿಣಾಮ ಲಾರಿಗೆ ಬೆಂಕಿ ಹತ್ತಿಕೊಂಡಿದೆ. ಅದೃಷ್ಟವಷಾತ್ ಲಾರಿ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ.


Spread the love

Exit mobile version