Home Mangalorean News Kannada News ವಿದ್ಯುತ್ ತುರಿಮಣೆಯಲ್ಲಿ ಕೈ ಸಿಲುಕಿದ ಕಾರ್ಮಿಕನನ್ನು ರಕ್ಷಿಸಿದ 5ನೇ ತರಗತಿ ಬಾಲಕ!

ವಿದ್ಯುತ್ ತುರಿಮಣೆಯಲ್ಲಿ ಕೈ ಸಿಲುಕಿದ ಕಾರ್ಮಿಕನನ್ನು ರಕ್ಷಿಸಿದ 5ನೇ ತರಗತಿ ಬಾಲಕ!

Spread the love

ವಿದ್ಯುತ್ ತುರಿಮಣೆಯಲ್ಲಿ ಕೈ ಸಿಲುಕಿದ ಕಾರ್ಮಿಕನನ್ನು ರಕ್ಷಿಸಿದ 5ನೇ ತರಗತಿ ಬಾಲಕ!

ಮಂಗಳೂರು: ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಸಮಯಪ್ರಜ್ಞೆ ಹಾಗೂ ಧೈರ್ಯದಿಂದ ಸಂಭವಿಸಬಹುದಾಗಿದ್ದ ಅನಾಹುತವನ್ನು ತಪ್ಪಿಸಿ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.

ಶಾಲೆಯ ಅಕ್ಷರ ದಾಸೋಹ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಆಕಸ್ಮಿಕವಾಗಿ ಅವರ ಕೈಬೆರಳು ಸಿಲುಕಿಕೊಂಡಿದೆ. ನೋವಿನಿಂದ ಸಿಬ್ಬಂದಿ ಕಿರುಚಿಕೊಂಡಾಗ, ಶಾಲಾ ಅಂಗಳದಲ್ಲಿ ಆಟವಾಡುತ್ತಿದ್ದ 5ನೇ ತರಗತಿ ವಿದ್ಯಾರ್ಥಿ ಮನ್ವಿತ್ ತಕ್ಷಣ ಪರಿಸ್ಥಿತಿಯನ್ನು ಗಮನಿಸಿದ್ದಾನೆ.

ತಡಮಾಡದೆ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ ಮನ್ವಿತ್, ಸಿಬ್ಬಂದಿಗೆ ಮತ್ತಷ್ಟು ಅಪಾಯವಾಗುವುದನ್ನು ತಪ್ಪಿಸಿದ್ದಾನೆ. ಬಾಲಕನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಮನ್ವಿತ್‌ನ ಧೈರ್ಯ, ಸಮಯಪ್ರಜ್ಞೆ ಹಾಗೂ ಸ್ವಯಂ ನಿರ್ಧಾರವನ್ನು ಶಾಲಾ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಅಂಚನ್ ಹಾಗೂ ಸದಸ್ಯರು ಶ್ಲಾಘಿಸಿದ್ದಾರೆ.

ಬಾಲಕನ ಕಾರ್ಯವನ್ನು ಅಭಿನಂದಿಸಲು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನೋಣಯ್ಯ ನಾಯ್ಕ್ ಹಾಗೂ ಸಿಆರ್‌ಪಿ ಜ್ಯೋತಿ ಶಾಲೆಗೆ ಭೇಟಿ ನೀಡಿ ಮನ್ವಿತ್‌ನ ಸಮಯಪ್ರಜ್ಞೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಚಿಕ್ಕ ವಯಸ್ಸಿನಲ್ಲೇ ಸಮಯೋಚಿತ ನಿರ್ಧಾರ ಕೈಗೊಂಡ ಮನ್ವಿತ್ ಇದೀಗ ಶಾಲೆಯಲ್ಲಷ್ಟೇ ಅಲ್ಲದೆ, ಸಾರ್ವಜನಿಕ ವಲಯದಲ್ಲೂ ಪ್ರಶಂಸೆಗೆ ಪಾತ್ರನಾಗಿದ್ದಾನೆ.


Spread the love

Exit mobile version