Home Mangalorean News Kannada News ವಿಧಾನಸಭೆ, ಪರಿಷತ್ ಗೆ ಚುನಾವಣೆ ನಡೆಯುತ್ತಿರುವಾಗ ಗ್ರಾಮ ಪಂಚಾಯಿತಿಗೇಕಿಲ್ಲ: ಹೈಕೋರ್ಟ್ ತಪರಾಕಿ

ವಿಧಾನಸಭೆ, ಪರಿಷತ್ ಗೆ ಚುನಾವಣೆ ನಡೆಯುತ್ತಿರುವಾಗ ಗ್ರಾಮ ಪಂಚಾಯಿತಿಗೇಕಿಲ್ಲ: ಹೈಕೋರ್ಟ್ ತಪರಾಕಿ

Spread the love

ವಿಧಾನಸಭೆ, ಪರಿಷತ್ ಗೆ ಚುನಾವಣೆ ನಡೆಯುತ್ತಿರುವಾಗ ಗ್ರಾಮ ಪಂಚಾಯಿತಿಗೇಕಿಲ್ಲ: ಹೈಕೋರ್ಟ್ ತಪರಾಕಿ

ಬೆಂಗಳೂರು: ಕೊರೋನಾ ನೆಪವೊಡ್ಡಿ ಸರ್ಕಾರ ಗ್ರಾಮ ಪಂಚಾಯತ್ ಚುನಾವಣೆಯನ್ನು ಮುಂದೂಡುತ್ತಿರುವುದಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತ ಪಡಿಸಿದೆ.

ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಅನಿರ್ದಿಷ್ಟಾವಧಿ ಮುಂದೂಡುವಂತೆ ಸರ್ಕಾರ ಕೇಳುತ್ತಿರುವುದು ಸರಿಯಲ್ಲ ಎಂದು ಅಭಿಪ್ರಾಯ ಪಟ್ಟಿರುವ ಹೈಕೋರ್ಟ್‌ ಹಂತ ಹಂತವಾಗಿ ಚುನಾವಣೆ ನಡೆಸಲು ಸಾಧ್ಯವಿಲ್ಲವೇ? ಎಂದು ಪ್ರಶ್ನೆ ಮಾಡಿದೆ.

 ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ಅವರಿದ್ದ ವಿಭಾಗೀಯ ಪೀಠ ಶುಕ್ರವಾರ ಚುನಾವಣಾ ಆಯೋಗ, ರಾಜ್ಯ ಸರ್ಕಾರ ಮತ್ತು ಅರ್ಜಿದಾರರ ವಾದಗಳನ್ನು ಆಲಿಸಿತು. ಗ್ರಾಮ ಪಂಚಾಯಿತಿ ಚುನಾವಣೆ; ಆಯೋಗದ ಸ್ಪಷ್ಟನೆ ಈ ಕುರಿತು ಅರ್ಜಿಗಳ ವಿಚಾರಣೆ ನ್ಯಾಯಾಲಯದಲ್ಲಿ ನಡೆಯತ್ತಿದ್ದರೂ ಸಹ ಚುನಾವಣಾ ಆಯೋಗ ಚುನಾವಣೆ ನಡೆಸಬಹುದು ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ. ಬಿಹಾರ ಮತ್ತು ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗಳೇ ನಡೆಯುತ್ತಿವೆ, ಗ್ರಾಮ ಪಂಚಾಯಿತಿ ಚುನಾವಣೆ ಏಕೆ ಬೇಡ? ಎಂದು ಕೋರ್ಟ್‌ ಪ್ರಶ್ನಿಸಿದೆ.

ಪ್ರಕರಣಗಳು ಕಡಿಮೆ ಇರುವ ಜಿಲ್ಲೆಗಳಲ್ಲಿ ಹಂತ-ಹಂತವಾಗಿ ಚುನಾವಣೆ ನಡೆಸಬಹುದು. ಸರ್ಕಾರ ಶಾಲಾ-ಕಾಲೇಜಗಳ ಪರೀಕ್ಷೆಯನ್ನೇ ನಡೆಸಿದೆ. ಚುನಾವಣೆ ನಡೆಸಲು ಏಕೆ ಸಾಧ್ಯವಿಲ್ಲ? ಎಂದು ಕೋರ್ಟ್ ಕೇಳಿದೆ.

ಸರ್ಕಾರದ ಪರವಾಗಿ ವಾದ ಮಂಡನೆ ಮಾಡಿದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ. ನಾವಡಗಿ, “ಸರ್ಕಾರ ಚುನಾವಣೆ ವಿರೋಧಿಸುತ್ತಿಲ್ಲ. ಈ ಚುನಾವಣೆಯಲ್ಲಿ ಸರ್ಕಾರಕ್ಕೆ ಯಾವುದೇ ರಾಜಕೀಯ ಹಿತಾಸಕ್ತಿ ಇಲ್ಲ. ಸಾಲು ಸಾಲು ಹಬ್ಬ, ಕೊರೊನಾ ಹಿನ್ನಲೆಯಲ್ಲಿ ಜನರ ಆರೋಗ್ಯದ ದೃಷ್ಟಿಯಿಂದ ಮತ್ತು ರಾಜ್ಯದಲ್ಲಿ ಕಂಡು ಕೇಳರಿಯದ ಪ್ರವಾಹ ಪರಿಸ್ಥಿತಿ ಎದುರಾಗಿದೆ ಎಂದು ಎಜಿ ನ್ಯಾಯಾಲಯಕ್ಕೆ ವಿವರಿಸಿದ್ದಾರೆ.ಕಾಲಾವಕಾಶ ಕೋರಲಾಗಿದೆ” ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಚುನಾವಣೆಯನ್ನು ಮುಂದೂಡಿದರೇ ಮತದಾರರ ಪಟ್ಟಿಯನ್ನು ಮತ್ತೆ ಸಿದ್ದಪಡಿಸಬೇಕಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ಅಭಿಪ್ರಾಯ ಪಟ್ಟಿದೆ.


Spread the love

Exit mobile version