ವೈದ್ಯರು, ಸಿಬಂದಿಗಳಿಗೆ ಕೊರೋನಾ ಪಾಸಿಟಿವ್ ; ಉಡುಪಿ ಜಿಲ್ಲಾಸ್ಪತ್ರೆ ಮೂರು ದಿನ ಸೀಲ್ ಡೌನ್

Spread the love

ವೈದ್ಯರು, ಸಿಬಂದಿಗಳಿಗೆ ಕೊರೋನಾ ಪಾಸಿಟಿವ್ ; ಉಡುಪಿ ಜಿಲ್ಲಾಸ್ಪತ್ರೆ ಮೂರು ದಿನ ಸೀಲ್ ಡೌನ್

ಉಡುಪಿ: ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಯ ಇಬ್ಬರು ವೈದ್ಯರು, ಓರ್ವ ನರ್ಸ್ ಹಾಗೂ ಇತರ ಇಬ್ಬರು ಸಿಬ್ಬಂದಿಗೆ ಕೊರೋನ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯನ್ನು ಮೂರು ದಿನಗಳ ಕಾಲ ಸೀಲ್ಡೌನ್ ಮಾಡಲಾಗಿದೆ.

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ದಾಖಲಾದ ಒರ್ವ ರೋಗಿ ಜ್ವರ ಕಾಣಿಸಿಕೊಂಡಿದ್ದು ಅವರನ್ನು ಹಾಗೂ ಅದೇ ವಾರ್ಡಿನ ಇತರ ರೋಗಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ 9 ಮಂದಿ ರೋಗಿಗಳಿಗೆ ಸೋಂಕು ದೃಢಪಟ್ಟಿದೆ. ಅಲ್ಲದೆ ಅವರಿಗೆ ಚಿಕಿತ್ಸೆ ನೀಡಿದ ಇಬ್ಬರು ವೈದ್ಯರು , ಒಬ್ಬರು ನರ್ಸ್ ಹಾಗೂ ವಾರ್ಡ್ನಲ್ಲಿ ಸ್ವಚ್ಛತಾ ಕೆಲಸ ಮಾಡಿದ ಸಿಬ್ಬಂದಿ ಹಾಗೂ ಆಸ್ಪತ್ರೆಯಲ್ಲಿ ಅಡುಗೆ ಮಾಡುವವರಿಗೆ ವೈರಸ್ ಬಾಧಿಸಿದೆ.

ಈ ನಿಟ್ಟಿನಲ್ಲಿ ಆಸ್ಪತ್ರೆಯನ್ನು ಬಂದ್ ಮಾಡಿ, ಒಳಗಿನಿಂದ ಸ್ಯಾನಿಟೈಸ್ ಮೂಲಕ ಚಿಗೊಳಿಸಲಾಗುತ್ತಿದೆ. ತುರ್ತು ಚಿಕಿತ್ಸೆ, ಐಸೋಲೇಶನ್ ಹಾಗೂ ಫಿವರ್ ಕ್ಲಿನಿಕ್ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ.

ತುರ್ತು ಚಿಕಿತ್ಸೆ ಹೊರತು ಪಡಿಸಿ ಸಾಮಾನ್ಯ ರೋಗಿಗಳ ಪ್ರವೇಶವನ್ನು ನಿಬಂರ್ಧಿಸಲಾಗಿದೆ. ಸದ್ಯ ಮೂರು ದಿನಳ ಕಾಲ ಬಂದ್ ಮಾಡಿ, ಇಡೀ ಆಸ್ಪತ್ರೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುತ್ತದೆ. ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಹಾಗೂ ರೋಗಿಗಳಿಗೆ ಪಾಸಿಟಿವ್ ಬಂದಿರುವುದರಿಂದ ಹಾಗೂ ಮುಂದೆ ವೈದ್ಯರಿಂದ ಸಾರ್ವಜನಿಕರಿಗೆ ಖಾಯಿಲೆ ಹರಡಬಾರದೆಂಬ ಉದ್ದೇಶದಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಸರ್ಜನ್ ಡಾ.ಮಧುಸೂಧನ್ ನಾಯಕ್ ತಿಳಿಸಿದ್ದಾರೆ.


Spread the love