Home Mangalorean News Kannada News ಶನಿವಾರ ಕೊಲ್ಲೂರಿಗೆ ಶ್ರೀಲಂಕಾ ಪ್ರಧಾನಿ ರಣಿಲ್ ವಿಕ್ರಮ್ ಸಿಂಘೆ ಭೇಟಿ

ಶನಿವಾರ ಕೊಲ್ಲೂರಿಗೆ ಶ್ರೀಲಂಕಾ ಪ್ರಧಾನಿ ರಣಿಲ್ ವಿಕ್ರಮ್ ಸಿಂಘೆ ಭೇಟಿ

Spread the love

ಶನಿವಾರ ಕೊಲ್ಲೂರಿಗೆ ಶ್ರೀಲಂಕಾ ಪ್ರಧಾನಿ ರಣಿಲ್ ವಿಕ್ರಮ್ ಸಿಂಘೆ ಭೇಟಿ

ಉಡುಪಿ: ಶ್ರೀಲಂಕಾ ಪ್ರಧಾನಿ ರಣಿಲ್ ವಿಕ್ರಮ್ ಸಿಂಘೆ ಅವರು ಮೂರು ದಿನಗಳ ಪ್ರವಾಸಕ್ಕಾಗಿ ಶುಕ್ರವಾರ ಕರ್ನಾಟಕಕ್ಕೆ ಆಗಮಿಸಲಿದ್ದಾರೆ.

ಶುಕ್ರವಾರ ಸಂಜೆ ಕೊಲಂಬೊದಿಂದ ವಿಶೇಷ ವಿಮಾನದಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಪ್ರಧಾನಿ ವಿಕ್ರಮ ಸಿಂಘೆ ಅವರು ರಾತ್ರಿ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಶನಿವಾರ ಬೆಳಿಗ್ಗೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಲಿರುವ ಅವರು ಕೊಲ್ಲೂರಿನಲ್ಲಿ ವಿಶೇಷ ಆರತಿ ಪೂಜೆ ಮತ್ತು ಮಹಾ ಪೂಜೆಯಲ್ಲಿ ಪಾಲ್ಗೊಂಡು ಮಧ್ಯಾಹ್ನ 1.30 ಬೆಂಗಳೂರಿಗೆ ವಾಪಾಸಾಲಿದ್ದು, ಬೆಂಗಳೂರಿನಲ್ಲಿ ರಾತ್ರಿ ವಾಸ್ತವ್ಯ ಹೂಡಿ ಭಾನುವಾರ ಸಂಜೆ ವಿಶೇಷ ವಿಮಾನದ ಮೂಲಕ ಕೊಲಂಬೊಗೆ ವಾಪಾಸಾಗಲಿದ್ದಾರೆ.


Spread the love

Exit mobile version