ಶಾಲಾ ಮಕ್ಕಳನ್ನು ಪಿಕಪ್ & ಟಿಪ್ಪರ್ ನಲ್ಲಿ ಅಧ್ಯಯನಕ್ಕೆ ಕರೆದೊಯ್ದ ಮುಖ್ಯೋಪಾಧ್ಯಾಯ

Spread the love

ಶಾಲಾ ಮಕ್ಕಳನ್ನು ಪಿಕಪ್ & ಟಿಪ್ಪರ್ ನಲ್ಲಿ ಅಧ್ಯಯನಕ್ಕೆ ಕರೆದೊಯ್ದ ಮುಖ್ಯೋಪಾಧ್ಯಾಯ

ಬೆಳ್ತಂಗಡಿ: ರಸ್ತೆ ಸುರಕ್ಷತಾ ಕ್ರಮಗಳನ್ನು ಮರೆತು ಕಾನೂನು ಬಾಹಿರವಾಗಿ ಸರಕು ಸಾಗಣೆಯಂತೆ ಶಾಲಾ ಮಕ್ಕಳನ್ನು ಜೇನು ಕೃಷಿ ಅಧ್ಯಯನ ಮಾಡಲು ತೆರೆದ ಪಿಕಪ್ ಮತ್ತು ಟಿಪ್ಪರ್ ನಲ್ಲಿ ಕರೆದುಕೊಂಡು ಹೋದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದಲ್ಲಿ ನಡೆದಿದೆ.

ಇತ್ತೀಚೆಗಷ್ಟೇ ಶತಮಾನೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಿದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಳೆಂಜದ ಪ್ರಬಾರ ಮುಖ್ಯೋಪಾಧ್ಯಾಯ ಕಿರಣ್ ಎಂಬವರ ನೇತೃತ್ವದಲ್ಲಿ ಫೆ.10 ರಂದು ಬೆಳಗ್ಗೆ ಶಾಲಾ ಮಕ್ಕಳನ್ನು KA-21-A-8776 ನಂಬರಿನ ಪಿಕಪ್ ಮತ್ತು KA-70-2596 ನಂಬರಿನ ಟಿಪ್ಪರ್ ವಾಹನದಲ್ಲಿ ಜೇನು ಕೃಷಿ ಅಧ್ಯಯನದ ಹೆಸರಿನಲ್ಲಿ ಸ್ಥಳೀಯ ನಾಲ್ಕೂರು ಬಳಿಯ ಅನಿಲ್ ಫಾರ್ಮ್ ಗೆ ಕರೆದುಕೊಂಡು ಹೋಗಿ ಬಳಿಕ ವಾಪಸ್ ಶಾಲೆಗೆ ಕರೆದುಕೊಂಡು ಬಂದಿದ್ದಾರೆ.

ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳ ಪೋಷಕರು ಪಿಕಪ್ ಮತ್ತು ಟಿಪ್ಪರ್ ಸೇರಿದಂತೆ ಸರಕು ಸಾಗಣೆ ವಾಹನಗಳಲ್ಲಿ ಕೂಲಿ ಕಾರ್ಮಿಕರನ್ನೂ ಕರೆದುಕೊಂಡು ಹೋಗಲು ಮೋಟಾರು ಕಾಯ್ದೆ ಅಡಿಯಲ್ಲಿ ಅವಕಾಶವಿಲ್ಲದಿರುವಾಗ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಿರುವುದು ಏಕೆ ಅದಲ್ಲದೆ ಈ ರೀತಿ ಕರೆದುಕೊಂಡು ಹೋಗಿ ಶಾಲಾ ಮಕ್ಕಳಿಗೆ ಏನಾದರೂ ಅನಾಹುತ ನಡೆದ್ರೆ ಯಾರು ಹೊಣೆ ಎಂದು ಮುಖ್ಯೋಪಾಧ್ಯಾಯ ಕಿರಣ್ ಅವರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಶಾಲಾ ಮಕ್ಕಳನ್ನು ಪಿಕಪ್ ಮತ್ತು ಟಿಪ್ಪರ್ ನಲ್ಲಿ ಕರೆದುಕೊಂಡು ಹೋಗುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಅಗುತ್ತಿದ್ದಂತೆ ಈ ಬಗ್ಗೆ ಪೊಲೀಸ್ ಇಲಾಖೆ ಮುಖ್ಯೋಪಾಧ್ಯಾಯ ಕಿರಣ್ ಮತ್ತು ಎರಡು ವಾಹನ ಚಾಲಕರಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments