Home Mangalorean News Kannada News ಶಾಲಾ ವಿದ್ಯಾರ್ಥಿಗೆ ಶಿಕ್ಷಕರಿಂದ ಹಲ್ಲೆ: ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಶಾಲಾ ವಿದ್ಯಾರ್ಥಿಗೆ ಶಿಕ್ಷಕರಿಂದ ಹಲ್ಲೆ: ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Spread the love

ಶಾಲಾ ವಿದ್ಯಾರ್ಥಿಗೆ ಶಿಕ್ಷಕರಿಂದ ಹಲ್ಲೆ: ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಸುಬ್ರಹ್ಮಣ್ಯ: ಸ್ಥಳೀಯ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಪ್ರಾಪ್ತ ಬಾಲಕನ ಮೇಲೆ ಶಿಕ್ಷಕರೊಬ್ಬರು ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ನವೆಂಬರ್ 24ರಂದು ಆರೋಪಿತ ಚೇತನ್‌ ಅವರು ಬಾಲಕನನ್ನು ಗದರಿಸಿ, ಕೋಲಿನಿಂದ ಹೊಡೆಯುತ್ತಿರುವ ವಿಡಿಯೋ ಮೊಬೈಲ್‌ ಮೂಲಕ ಹರಡಿಕೊಂಡಿದ್ದು, ಇದು ಬಾಲಕನ ತಾಯಿಯ ಗಮನಕ್ಕೆ ಬಂದಿದೆ.

ಈ ಸಂಬಂಧ ಬಾಲಕನ ತಾಯಿ ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 60/2025, ಕಲಂ 118(1) BNS2023 ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸ್‌ ಕ್ರಮವಾಗತೆಯೆಂದು ತಿಳಿಸಲಾಗಿದೆ. ಪ್ರಕರಣ ತನಿಖೆಯಲ್ಲಿದೆ.


Spread the love

Exit mobile version