ಶಾಸಕ ಡಿ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಸಂವಾದ ಕಾರ್ಯಕ್ರಮ
ಮಂಗಳೂರು ವಿಧಾನಸಭಾ ಕ್ಷೇತ್ರದ ಪುದು ಶಕ್ತಿ ಕೇಂದ್ರದಿಂದ ಸುಜೀರ್ ನಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರೊಂದಿಗೆ ಮತ್ತು ಕೇಂದ್ರ ಸರಕಾರದ ಯೋಜನೆಗಳ ಫಲಾನುಭವಿಗಳೊಂದಿಗೆ ಶಾಸಕ ಡಿ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಸಂವಾದ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್, ಪ್ರಧಾನಿ ನರೇಂದ್ರ ಮೋದಿಯವರು ಎಲ್ಲಾ ವರ್ಗದವರ ಅಭಿವೃದ್ಧಿಯನ್ನು ಗುರಿಯಾಗಿಟ್ಟು ಯೋಜನೆಗಳನ್ನು ರೂಪಿಸಿದ್ದಾರೆ. ಅದರಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನೇರವಾಗಿ ಯೋಜನೆಗಳ ಪ್ರಯೋಜನ ಸಿಕ್ಕಿದೆ. ಜಾತಿ, ಮತ, ಧರ್ಮದ ಭೇದವಿಲ್ಲದೆ ದುಡಿದ ಪ್ರಧಾನಿ ಮೋದಿಯವರನ್ನು ಮತ್ತೊಮ್ಮೆ ಗೆಲ್ಲಿಸುವ ಹೊಣೆ ನಮ್ಮ ಮೇಲಿದೆ. ಹಾಗೇ ನಮ್ಮ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಅವಿರತವಾಗಿ ಜಿಲ್ಲೆಯಲ್ಲಿ ಓಡಾಡಿ, ಪಕ್ಷದ ಏಳಿಗೆಗೆ ಶ್ರಮಿಸಿದ್ದಾರೆ. ಅವರು ಜಿಲ್ಲೆಗೆ ತಂದ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡುವ ಕೆಲಸ ನಡೆಯಬೇಕಿದೆ. ಮೋದಿ ಮತ್ತೊಮ್ಮೆ, ನಳಿನ್ ಇನ್ನೊಮ್ಮೆ ಎನ್ನುವ ರೀತಿಯಲ್ಲಿ ನಾವು ಕೆಲಸ ಮಾಡೋಣ ಎಂದು ಹೇಳಿದರು. ಕಾರ್ಯಕರ್ತರಿಗೆ ಮುಂದಿನ ತಿಂಗಳು ನಡೆಯುವ ಚುನಾವಣೆಗೆ ಹೇಗೆ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕು ಎನ್ನುವುದರ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.
ಬಿಜೆಪಿ ಜಿಲ್ಲಾ ಕೋಶಾಧಿಕಾರಿ ಸಂಜಯ ಪ್ರಭು, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ವಸಂತ ಜೆ ಪೂಜಾರಿ, ಸ್ಥಳೀಯ ಮುಖಂಡರಾದ ವಿಠಲ ಸಾಲ್ಯಾನ್, ದಿನೇಶ ಶೆಟ್ಟಿ ಕೊಟ್ಟಿಂಜ, ಪ್ರವೀಣ್ ಶೆಟ್ಟಿ ಸುಜೀರ್, ಪ್ರತಾಪ್ ಆಳ್ವ ಸುಜೀರ್ ಗುತ್ತು, ಸುರೇಂದ್ರ ಕಂಬಳಿ, ಸುಜೀರ್ ಬೀಡು, ಜಯ ಬೆಲ್ಚಡ ದತ್ತನಗರ, ಗಣೇಶ್ ದತ್ತನಗರ, ಧೀರಜ್ ಮಾರಿಪಳ್ಳ, ಪ್ರಮೋದ್ ಸುಜೀರ್ ಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.













