ಶಾಸಕ ಹರೀಶ್ ಪೂಂಜಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಆಯುಕ್ತರಿಗೆ ಕಾಂಗ್ರೆಸ್ ದೂರು

Spread the love

ಶಾಸಕ ಹರೀಶ್ ಪೂಂಜಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಆಯುಕ್ತರಿಗೆ ಕಾಂಗ್ರೆಸ್ ದೂರು

ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಮಾಡಿರುವ ಶಾಸಕ ಹರೀಶ್ ಪೂಂಜಾ, ಬಿಜೆಪಿ ಕಾರ್ಯಕರ್ತ ವಿಕಾಸ್.ಪಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪೊಲೀಸ್ ಕಮಿಷನರ್ ಗೆ ಸೋಮವಾರ ದೂರು ನೀಡಿದೆ.

ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪರವಾಗಿ ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಗೆ ದೂರು ನೀಡಿದರು.

“ಶಾಸಕ ಹರೀಶ್ ಪೂಂಜಾ, ಬಿಜೆಪಿ ಕಾರ್ಯಕರ್ತ ವಿಕಾಸ್.ಪಿ ಎಂಬವರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಸಮಾಜದಲ್ಲಿ ಶಾಂತಿ ಭಂಗ ಉಂಟು ಮಾಡುವ ಉದ್ದೇಶದಿಂದ ಕೋಮು ಗಲಭೆಗೆ ಪ್ರಚೋದನೆಗೆ ನೀಡಿದ್ದಾರೆ. ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ಇಬ್ಬರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುಬೇಕು” ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಈ ಸಂದರ್ಭ ಮ್ಯಾಕ್ವಿನ್, ರೋನ್ಸ್ಟನ್, ಕೇವಿನ್, ವೆರ್ ನೊನ್ ಉಪಸ್ಥಿತರಿದ್ದರು.


Spread the love
Subscribe
Notify of

0 Comments
Inline Feedbacks
View all comments