Home Mangalorean News Kannada News ಶಾಸ್ತ್ರೀಯ ನೃತ್ಯ ಕಲಾವಿದೆಯಾಗಿ ರೆಮೋನಾ ಎವೆಟ್ ಪೆರೇರಾ ಆಯ್ಕೆ

ಶಾಸ್ತ್ರೀಯ ನೃತ್ಯ ಕಲಾವಿದೆಯಾಗಿ ರೆಮೋನಾ ಎವೆಟ್ ಪೆರೇರಾ ಆಯ್ಕೆ

Spread the love

ಶಾಸ್ತ್ರೀಯ ನೃತ್ಯ ಕಲಾವಿದೆಯಾಗಿ ರೆಮೋನಾ ಎವೆಟ್ ಪೆರೇರಾ ಆಯ್ಕೆ

ಮಂಗಳೂರು : ಮಂಗಳೂರಿನ ಸಂತ ಅಲೋಸಿಯೆಸ್ ಪರಿಗಣಿತ ವಿವಿ ವಿದ್ಯಾರ್ಥಿನಿ ರೆಮೋನಾ ಎವೆಟ್ ಪೆರೇರಾ ಬೆಂಗಳೂರು ದೂರದರ್ಶನ ಚಂದನವಾಹಿನಿ ವತಿಯಿಂದ ನಡೆಸಲಾದ ಆಡಿಷನ್‌ನಲ್ಲಿ ಯಶಸ್ವಿಯಾಗಿ ಭಾಗವಹಿಸಿ, ಬಿ-ಗ್ರೇಡ್ ಶಾಸ್ತ್ರೀಯ ನೃತ್ಯ ಕಲಾವಿದೆಯಾಗಿ ಆಯ್ಕೆಯಾಗಿದ್ದಾರೆ.

ಸೌರಭ ಸಂಗೀತ ನೃತ್ಯ ಕಲಾ ಪರಿಷತ್ ಗುರುಗಳಾದ ಡಾ. ಶ್ರೀವಿದ್ಯಾ ಅವರ ಶಿಷ್ಯೆಯಾಗಿರುವ ರೆಮೋನಾ ಅವರು ಕಳೆದ 18 ವರ್ಷಗಳಿಂದ ಭರತನಾಟ್ಯವನ್ನು ಅಭ್ಯಾಸ ಮಾಡುತ್ತಿದ್ದು, ಅವರ ಮಾರ್ಗದರ್ಶನದಲ್ಲಿ ತಮ್ಮ ಕಲಾ ಪ್ರತಿಭೆಯನ್ನು ಬೆಳೆಸಿಕೊಂಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.


Spread the love

Exit mobile version