Home Mangalorean News Kannada News ಶಿರಿಯಾರ ಸೊಸೈಟಿಗೆ ಕೋಟ್ಯಂತರ ರೂ. ವಂಚನೆ ಪ್ರಕರಣ : ಮತ್ತೋರ್ವ ಆರೋಪಿ ಸೆರೆ

ಶಿರಿಯಾರ ಸೊಸೈಟಿಗೆ ಕೋಟ್ಯಂತರ ರೂ. ವಂಚನೆ ಪ್ರಕರಣ : ಮತ್ತೋರ್ವ ಆರೋಪಿ ಸೆರೆ

Spread the love

ಶಿರಿಯಾರ ಸೊಸೈಟಿಗೆ ಕೋಟ್ಯಂತರ ರೂ. ವಂಚನೆ ಪ್ರಕರಣ : ಮತ್ತೋರ್ವ ಆರೋಪಿ ಸೆರೆ

ಉಡುಪಿ : ಸಾಬರಕಟ್ಟೆಯಲ್ಲಿರುವ ಶಿರಿಯಾರ ಸೇವಾ ಸಹಕಾರಿ ಸಂಘದ ಕಾವಡಿ ಶಾಖೆಯಲ್ಲಿ ಕೋಟ್ಯಂತರ ರೂ. ವಂಚನೆ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.

ಕಾವಡಿ ಗ್ರಾಮದ ಹವರಾಲು ನಿವಾಸಿ ಹರೀಶ್ ಕುಲಾಲ್ (32) ಬಂಧಿತ ಆರೋಪಿ.

ಸಂಘದ ಕಾವಡಿ ಶಾಖೆಯ ಪ್ರಭಾರ ಮ್ಯಾನೇಜರ್, ಹೆಗ್ಗುಂಜೆ ಗ್ರಾಮದ ಜಾನುವಾರಕಟ್ಟೆ ನಿವಾಸಿ ಸುರೇಶ ಭಟ್ ಹಾಗೂ ಶಾಖೆಯ ಕಿರಿಯ ಗುಮಾಸ್ತ ಹರೀಶ್ ಕುಲಾಲ್ ಸಂಘಕ್ಕೆ 1.70ಕೋಟಿ ರೂ. ಹಣ ವಂಚಿಸಿ ತಲೆಮರೆಸಿಕೊಂಡಿದ್ದರು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ನ.18ರಂದು ಸುರೇಶ್ ಭಟ್‌ನನ್ನು ಬಂಧಿಸಿದ್ದರು. ಇದೀಗ ತಲೆಮರೆಸಿಕೊಂಡಿದ್ದ ಹರೀಶ್ ಕುಲಾಲ್‌ನನ್ನು ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ. ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಮಾರ್ಗದರ್ಶನದಲ್ಲಿ ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರವೀಣ್ ಕುಮಾರ್, ಎಸ್ಸೈ ಮಾಂತೇಶ್ ಜಾಭಗೌಡ, ಹಾಗೂ ಠಾಣಾ ಸಿಬ್ಬಂದಿ ಕೃಷ್ಣ ಶೇರೆಗಾರ, ಶ್ರೀಧರ್, ಶರತ್ ಅವರುಗಳ ತಂಡ ಬಂಧಿಸಿದೆ.


Spread the love

Exit mobile version