ಶೀರೂರು ಪರ್ಯಾಯ ಯಶಸ್ಸಿಗೆ ಸಹಕರಿಸಿದ ಸರ್ವರಿಗೂ ಧನ್ಯವಾದ : ಯಶ್ಪಾಲ್ ಸುವರ್ಣ
ಶ್ರೀ ಶೀರೂರು ಮಠದ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಯಶಸ್ಸಿಗೆ ಸಹಕರಿಸಿದ ಸರ್ವರಿಗೂ ಹೃತ್ಪೂರ್ವಕ ಧನ್ಯವಾದ ಸಲ್ಲಿಸುವುದಾಗಿ ಶೀರೂರು ಪರ್ಯಾಯ ಸ್ವಾಗತ ಸಮಿತಿಯ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಪರ್ಯಾಯ ಮಹೋತ್ಸವದ ಯಶಸ್ಸಿಗೆ ಹಗಲಿರುಳು ಶ್ರಮಿಸಿದ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಉಡುಪಿ ನಗರಸಭೆ ಹಾಗೂ ನಾಡಿನ ಸಮಸ್ತ ಶ್ರೀ ಕೃಷ್ಣ ಮುಖ್ಯಪ್ರಾಣ ಭಕ್ತರಿಗೆ, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಸಮಸ್ತರಿಗೂ ವಿಶೇಷ ಅಭಿನಂದನೆಗಳು.
ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಉಡುಪಿಯ ವಿವಿಧ ಭಾಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಸಾರ್ವಜನಿಕರಿಗೆ ಮನರಂಜನೆ ಒದಗಿಸಿದ ಕಾರ್ಯಕ್ರಮದ ಆಯೋಜಕರಿಗೆ, ವಿಶೇಷವಾಗಿ ನಗರದ ಸ್ವಚ್ಚತೆಗೆ ವಿಶೇಷ ಶ್ರಮವಹಿಸಿದ ಉಡುಪಿ ನಗರಸಭೆಯ ಪೌರಕಾರ್ಮಿಕರುಹಾಗೂ
ಸ್ವಯಂ ಸೇವಕರಿಗೆ ಸೇವೆ ಸಲ್ಲಿಸಿದ ಸರ್ವರಿಗೂ ಪೊಡವಿಗೊಡೆಯ ಉಡುಪಿ ಶ್ರೀಕೃಷ್ಣ ಅನುಗ್ರಹಿಸಲಿ ಎಂದು ಪರ್ಯಾಯ ಸ್ವಾಗತ ಸಮಿತಿಯ ಅಧ್ಯಕ್ಷನ ನೆಲೆಯಲ್ಲಿ ಹಾರೈಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













