ಶೀರೂರು ಸ್ವಾಮೀಜಿ ಚುನಾವಣಾ ಕಣಕ್ಕೆ; ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ, ಪ್ರಮೋದ್ ಉತ್ತಮ ನಾಯಕರಂತೆ

Spread the love

ಶೀರೂರು ಸ್ವಾಮೀಜಿ ಚುನಾವಣಾ ಕಣಕ್ಕೆ; ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ, ಪ್ರಮೋದ್ ಉತ್ತಮ ನಾಯಕರಂತೆ

ಉಡುಪಿ: ಉಡುಪಿ ಅಷ್ಟಮಠಗಳಲ್ಲಿ ಒಂದಾದ ಶೀರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಯವರು ಚುನಾವಣಾ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ

ಈ ಕುರಿತು ಶೀರೂರು ಮೂಲ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವುದಾಗಿ ಹೇಳಿದ್ದಾರೆ.

ನನಗೆ ಚುನಾವಣೆಗೆ ನಿಲ್ಲಲು ಯಾವುದೇ ಆಸೆಗಳಿರಲಿಲ್ಲ ಆದರೆ ಉಡುಪಿಯಲ್ಲಿ ಬಿಜೆಪಿ ಪಕ್ಷ ಯಾವುದೇ ರೀತಿಯ ಅಭಿವೃದ್ದಿ, ಹಿಂದು ಸಮುದಾಯಕ್ಕೆ ಅಗತ್ಯವಿರುವ ಯಾವುದೇ ಸೇವೆ ನೀಡುವಲ್ಲಿ ವಿಫಲಾಗಿದೆ.

ಬಿಜೆಪಿ ಪಕ್ಷದಿಂದ ಟಿಕೇಟ್ ಕೊಂಡಿ ಎಂದು ನಾನು ಕೇಳಿಲ್ಲ ಒಂದು ವೇಳೆ ಪಕ್ಷ ಬಯಸಿ ಅವಕಾಶ ನೀಡಿದರೆ ಬಿಜೆಪಿಯಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಇಲ್ಲವಾದರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಉಡುಪಿಯಿಂದ ಚುನಾವಣಾ ಕಣಕ್ಕೆ ಇಳಿಯಲಿದ್ದೇನೆ ಎಂದರು.

ರಾಷ್ಟೀಯ ಹಂತದಲ್ಲಿ ಬಿಜೆಪಿ ಪಕ್ಷ ಉತ್ತಮವಾದ ಕೆಲಸ ಮಾಡುತ್ತಿದ್ದ ಹಲವಾರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದೇ ರೀತಿಯಲ್ಲಿ ಉಡುಪಿಯಲ್ಲೂ ಕೂಡ ಪಕ್ಷ ಹಾಗೂ ಪಕ್ಷದ ಜನಪ್ರತಿನಿಧಿಗಳು ಜನರ ನಿರೀಕ್ಷೆಯಂತೆ ಕೆಲಸ ಮಾಡಬೇಕು.

ಕಾಂಗ್ರೆಸ್ ಪಕ್ಷ ಟಿಕೇಟ್ ನೀಡಿದರೆ ಸ್ಪರ್ಧಿಸುವಿರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸ್ವಾಮೀಜಿಯವರು ಕಾಂಗ್ರೆಸಿನಲ್ಲಿ ಈಗಾಗಲೇ ಉತ್ತಮ ಅಭ್ಯರ್ಥಿಗಳಿದ್ದಾರೆ. ಉಡುಪಿ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಜನರ ನಿರೀಕ್ಷೆಗೂ ಮೀರಿ ಕೆಲಸ ಮಾಡುತ್ತಿದ್ದಾರೆ ಎಂದರು.


Spread the love