ಸಂವಿಧಾನದ ಆಶಯಗಳನ್ನು ನಾವೆಲ್ಲರೂ ಪಾಲಿಸಬೇಕು : ಕುಂದಾಪುರ ಉಪ ವಿಭಾಗಾಧಿಕಾರಿ ಕೆ.ರಾಜು

Spread the love

ಸಂವಿಧಾನದ ಆಶಯಗಳನ್ನು ನಾವೆಲ್ಲರೂ ಪಾಲಿಸಬೇಕು : ಕುಂದಾಪುರ ಉಪ ವಿಭಾಗಾಧಿಕಾರಿ ಕೆ.ರಾಜು

ಕುಂದಾಪುರ: ಡಾ.ಬಿ.ಆರ್.ಅಂಬೇಡ್ಕರ್ ಅವರು ನಮಗೋಸ್ಕರ ಹಾಗೂ ನಮಗಾಗಿ ಬೇಕಾಗಿರುವ ಸಂವಿಧಾನವನ್ನು ರಚಿಸಿಕೊಟ್ಟವರು. ದೇಶದ ಇಂದಿನ ಕಠಿಣ ಪರಿಸ್ಥಿತಿಯಲ್ಲಿ ಸಂವಿಧಾನದ ಆಶಯಗಳನ್ನು ನಾವೆಲ್ಲರೂ ಪಾಲಿಸಬೇಕು ಎಂದು ಕುಂದಾಪುರದ ಉಪ ವಿಭಾಗಾಧಿಕಾರಿ ಕೆ.ರಾಜು ಹೇಳಿದರು.

ಇಲ್ಲಿನ ತಾಲ್ಲೂಕು ಪಂಚಾಯಿತಿಯ ಡಾ.ವಿ.ಎಸ್.ಆಚಾರ್ಯ ಸಭಾಭವನದಲ್ಲಿ ಮಂಗಳವಾರ ಸರಳವಾಗಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಅವರ 129 ನೇ ಜನ್ಮ ದಿನಾಚರಣೆಯ ಅಂಗವಾಗಿ ನಡೆದ ಜಯಂತಿ ಆಚರಣೆಯಲ್ಲಿ ದೀಪ ಬೆಳಗಿಸಿ ಅವರು ಮಾತನಾಡಿದರು.

ಕುಂದಾಪುರ ಪೆÇಲೀಸ್ ಉಪ ವಿಭಾಗದ ಎಎಸ್ಪಿ ಹರಿರಾಂ ಶಂಕರ್ ಮಾತನಾಡಿ, ದೇಶದ ಒಟ್ಟಾರೆ ವ್ಯವಸ್ಥೆಯ ಬಗ್ಗೆ ಆಳವಾದ ಜ್ಞಾನವನ್ನು ಹೊಂದಿದ್ದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕನಸುಗಳನ್ನು ನನಸು ಮಾಡುವಲ್ಲಿ ಎಲ್ಲರ ಪ್ರಯತ್ನಗಳು ಸಾಗಬೇಕು. ದೇಶದ ಶೋಷಿತ ವರ್ಗಗಳ ರಕ್ಷಣೆಗಾಗಿ ಸಂವಿಧಾನದಲ್ಲಿ ಹೇಳಿರುವ ಅಂಶಗಳು ಹಾಗೂ ಕಾನೂನುಗಳ ಬಗ್ಗೆ ಹೆಮ್ಮೆ ಇದೆ ಎಂದರು.

ಕುಂದಾಪುರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೇಶವ ಶೆಟ್ಟಿಗಾರ್, ಬೈಂದೂರು ಕಾರ್ಯನಿರ್ವಹಣಾಧಿಕಾರಿ ಭಾರತಿ, ಕುಂದಾಪುರ ತಹಶೀಲ್ದಾರ್ ತಿಪ್ಪೇಸ್ವಾಮಿ, ತಾಲ್ಲೂಕು ಪಶು ವೈದ್ಯಾಧಿಕಾರಿ ಡಾ.ಸೂರ್ಯನಾರಾಯಣ ಉಪಾಧ್ಯಾಯ, ಪುರಸಭೆಯ ಪರಿಸರ ಇಂಜಿನಿಯರ್ ರಾಘವೇಂದ್ರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಣೇಕರ್, ತಾಲ್ಲೂಕು ಚುನಾವಣಾ ಶಾಖೆಯ ಅಧಿಕಾರಿ ರವಿ ಇದ್ದರು.


Spread the love