ಸಂಸದರು ಹಾಗೂ ಶಾಸಕರನ್ನು ನಿಲ್ಲಿಸಿಕೊಂಡು ಸೆಲ್ಫಿ ತೆಗೆಯಿರಿ – ಕೆ. ವಿಕಾಸ್ ಹೆಗ್ಡೆ

Spread the love

ಸಂಸದರು ಹಾಗೂ ಶಾಸಕರನ್ನು ನಿಲ್ಲಿಸಿಕೊಂಡು ಸೆಲ್ಫಿ ತೆಗೆಯಿರಿ – ಕೆ. ವಿಕಾಸ್ ಹೆಗ್ಡೆ

ಕುಂದಾಪುರ: ರಸ್ತೆ ಹೊಂಡಗಳ ಜೊತೆ ಬಿಜೆಪಿ ನಾಯಕರುಗಳು ಸೆಲ್ಫಿ ತೆಗೆದುಕೊಳ್ಳುವಾಗ ಅವರ ಶಾಸಕರು ಹಾಗೂ ಸಂಸದರನ್ನು ಹೊಂಡದ ಪಕ್ಕದಲ್ಲಿ ನಿಲ್ಲಿಸಿ ಫೋಟೋ ತೆಗೆಯುವುದು ಉತ್ತಮವೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದ್ದಾರೆ.

ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಗುಣಮಟ್ಟದ ಕಾಮಗಾರಿ ನಿರ್ವಹಿಸುವಂತೆ ಕ್ರಮವಹಿಸಬೇಕಾದದ್ದು ಶಾಸಕರು ಹಾಗೂ ಸಂಸದರ ಕರ್ತವ್ಯ. ಕುಂದಾಪುರ ವಿಧಾನ ಸಭಾ ಕ್ಷೇತ್ರದ ಮಟ್ಟಿಗೆ ಹೇಳಬೇಕೆಂದರೆ ಕಳೆದ ಆರು ಅವಧಿಯಿಂದ ಇಲ್ಲಿ ಬಿಜೆಪಿ ಶಾಸಕರು ಅಧಿಕಾರಲ್ಲಿದ್ದಾರೆ, ಇವತ್ತು ಕಳಪೆ ಗುಣಮಟ್ಟದ ರಸ್ತೆ ನಿರ್ಮಾಣವಾಗಲು ಶಾಸಕರ ಬೇಜವಾಬ್ದಾರಿ ಕೂಡ ಕಾರಣ, ಗುಣಮಟ್ಟದ ರಸ್ತೆ ನಿರ್ಮಾಣ ಮಾಡುವುದನ್ನು ಬಿಟ್ಟು ಬಿಜೆಪಿ ಪಕ್ಷದ ಜನಪ್ರತಿನಿದಿನಗಳ ನಿರ್ಲಕ್ಷದಿಂದ ಕುಳಿ ಬಿದ್ದಿರುವ ರಸ್ತೆಗಳಲ್ಲಿ ನಿಂತು ಸೆಲ್ಫಿ ತೆಗೆದುಕೊಂಡು ರಾಜ್ಯ ಸರ್ಕಾರವನ್ನು ಟೀಕಿಸುವುದು ಬಿಜೆಪಿ ಪಕ್ಷದವರ ರಾಜಕೀಯ ದಿವಾಳಿತನದ ಪರಮಾವದಿಯಾಗಿದೆ.

ಬಿಜೆಪಿ ಪಕ್ಷದ ಜನಪ್ರತಿನಿಧಿನಗಳಿಗೆ ಅಭಿವೃದ್ಧಿಯ ಚಿಂತನೆಯಿದ್ದರೆ ಕೇಂದ್ರ ಸರ್ಕಾರದಿಂದ ಸಮರ್ಪಕವಾಗಿ ರಾಜ್ಯಕ್ಕೆ ಬಾರದೆ ಇರುವ ನಮ್ಮ ತೆರಿಗೆ ಹಣದ ಪಾಲನ್ನು ಮೊದಲು ತರಲಿ ಅದನ್ನಾ ಬಿಟ್ಟು ಕಳೆದ ಎರಡು ವರ್ಷಗಳಿಂದ ಪಂಚ ಗ್ಯಾರಂಟಿಗಳ ಜೊತೆ ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಪರ ರಾಜ್ಯದ ಜನತೆ ಮೆಚ್ಚುಗೆಯ ಮಾತುಗಳನ್ನಾಡುವುದನ್ನು ಸಹಿಸಲು ಸಾಧ್ಯವಾಗದೆ ಬಿಜೆಪಿ ನಾಯಕರುಗಳು ರಾಜ್ಯ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments