ಸಂಸದರ ಆದರ್ಶ ಗ್ರಾಮ ಬಳ್ಪದಲ್ಲಿ ಫೆ.10ರಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಾಂಸ್ಕøತಿಕ ವೈಭವ

Spread the love

ಸಂಸದರ ಆದರ್ಶ ಗ್ರಾಮ ಬಳ್ಪದಲ್ಲಿ ಫೆ.10ರಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಾಂಸ್ಕøತಿಕ ವೈಭವ

ಮಂಗಳೂರು : ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಪಂಡಿತ್ ದೀನ್‍ದಯಾಳ್ ಉಪಾಧ್ಯಾಯ ಸೇವಾ ಕೇಂದ್ರ ಬಳ್ಪ, ಗ್ರಾಮ ವಿಕಾಸ ಪ್ರತಿಷ್ಠಾನ ಬಳ್ಪ ವತಿಯಿಂದ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಾಂಸ್ಕøತಿಕ ವೈಭವ ಫೆ.10ರಂದು ಸಾಯಂಕಾಲ 5ಕ್ಕೆ ಸುಳ್ಯ ತಾಲೂಕಿನ ಬಳ್ಪದಲ್ಲಿ ನಡೆಯಲಿದೆ.

ಸಾಮಾಜಿಕ ಕಾರ್ಯಕರ್ತ ಬಿ.ಎಲ್.ಸಂತೋಷ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸುಳ್ಯ ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸಂಸದ ನಳಿನ್‍ಕುಮಾರ್ ಕಟೀಲ್, ಆಳ್ವಾಸ್ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ಸುಳ್ಯ ತಾಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಜಿಪಂ ಸದಸ್ಯೆ ಆಶಾ ತಿಮ್ಮಪ್ಪ, ತಾಪಂ ಸದಸ್ಯ ಅಶೋಕ್ ನೆಕ್ರಾಜೆ, ಬಳ್ಪ ಗ್ರಾಪಂ ಅಧ್ಯಕ್ಷ ಪ್ರಕಾಶ್ ಮೂಡ್ನೂರು, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್.ರವಿ, ಸಹಾಯಕ
ಕಾರ್ಯನಿರ್ವಾಹಕ ಅಭಿಯಂತರ ನಾಗರಾಜ್.ಸಿ., ಸುಳ್ಯ ತಾಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಧುಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಬಳ್ಪ ಗ್ರಾಮಗದಲ್ಲಿ ಪಂಡಿತ್ ದೀನ್‍ದಯಾಳ್ ಉಪಾಧ್ಯಾಯ ಸೇವಾ ಕೇಂದ್ರ, ಕೇನ್ಯದಲ್ಲಿ ನೂತನ ಅಂಗನವಾಡಿ ಕೇಂದ್ರ, ಎಣ್ಣೆಮಜಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಗೆ ನವೀಕೃತ ತರಗತಿ ಕೊಠಡಿ, ಬಳ್ಪ ಗ್ರಾಪಂ ಕಚೇರಿಗೆ ಸೋಲಾರ್ ಪವರ್ ಬ್ಯಾಕ್‍ಅಪ್, ಗ್ರಾಮ ವಿಕಾಸ ಯೋಜನೆಯ ಪ್ರಥಮ ಹಂತದ ಕಾಮಗಾರಿಗಳ ಲೋಕಾರ್ಪಣೆ, ಮೆಸ್ಕಾಂ ವಿದ್ಯುತ್ ಪರಿವರ್ತಕ ಲೋಕಾರ್ಪಣೆ, ವಸತಿ ರಹಿತ ಬಡ ಕುಟುಂಬದ ಫಲಾನುಭವಿಗಳಿಗೆ ಮನೆ ನಿರ್ಮಾಣ ಕಾಮಗಾರಿ ಅದೇಶ ವಿತರಣೆ, ಪ್ರಯಾಣಿಕರ ಬಸ್ ತಂಗುದಾಣ, ಬಳ್ಪ ಉನ್ನತೀಕರಿಸಿದ ಸರ್ಕಾರಿ ಶಾಲೆಯ ರಂಗ ಮಂದಿರ ಟೈಲ್ಸ್ ಅಳವಡಿಸಿ ಅಭಿವೃದ್ಧಿ, ಅಡ್ಡಬೈಲು ಎಂಬಲ್ಲಿ ಶಿಶುಪಾಲನಾ ಕೇಂದ್ರ ನಿರ್ಮಾಣ ಕಾರ್ಯಕ್ರಮ ಅನುಷ್ಠಾನಗೊಂಡಿದೆ ಎಂದು ಸಂಸದರ ಪ್ರಕಟಣೆ ತಿಳಿಸಿದೆ.


Spread the love