ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

Spread the love

ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು ಸಾರ್ವಜನಿಕರ ಕುಂದು-ಕೊರತೆ ಆಲಿಸಿದರು.

ಈ ವೇಳೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ತಮ್ಮ ಭಾಗದ ಸಮಸ್ಯೆ, ಬೇಡಿಕೆಗಳು ಮತ್ತು ಅಹವಾಲುಗಳನ್ನು ಸಂಸದರ ಗಮನಕ್ಕೆ ತಂದರು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಸಂಸದರು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಸಮಸ್ಯೆಗಳ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಇದಲ್ಲದೇ ಸಾರ್ವಜನಿಕ ಭೇಟಿ ವೇಳೆ ವಿವಿಧ ಇಲಾಖೆ ಸೇರಿದಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ಹಲವಾರು ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದ ಕೆಲವು ಸಮಸ್ಯೆ-ಬೇಡಿಕೆಗಳ ಬಗ್ಗೆಯೂ ಜನರು ಸಂಸದರ ಗಮನಕ್ಕೆ ತಂದರು. ಸಾರ್ವಜನಿಕರ ಅಹವಾಲುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಂಸದರು, ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.


Spread the love
Subscribe
Notify of

0 Comments
Inline Feedbacks
View all comments