ಸಂಸದ ನಳಿನ್ ಕುಮಾರ್ ಕಟೀಲು ಅವರ ನವೀಕೃತ ಕಚೇರಿ ಉದ್ಘಾಟನೆ

Spread the love

ಸಂಸದ ನಳಿನ್ ಕುಮಾರ್ ಕಟೀಲು ಅವರ ನವೀಕೃತ ಕಚೇರಿ ಉದ್ಘಾಟನೆ

ಮಂಗಳೂರು: ದ.ಕ.ಜಿಲ್ಲಾಧಿಕಾರಿ ಕಚೇರಿಯ 2ನೇ ಮಹಡಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಅವರ ನವೀಕೃತ ಕಚೇರಿಯನ್ನು ಶನಿವಾರ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಮುಖ್ಯ ಸಚೇತಕ ಸುನೀಲ್ ಕುಮಾರ್, ಶಾಸಕರಾದ ಎಸ್.ಅಂಗಾರ, ರಾಜೇಶ್ ನಾಕ್, ಡಾ.ವೈ.ಭರತ್ ಶೆಟ್ಟಿ, ಡಿ.ವೇದವ್ಯಾಸ ಕಾಮತ್, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಪದ್ಮನಾಭ ಕೊಟ್ಟಾರಿ ಮೊದಲಾದವರು ಉಪಸ್ಥಿತರಿದ್ದರು.


Spread the love