ಸಂಸದ ನಳಿನ್ ಕುಮಾರ್ ಕಟೀಲ್ ರಿಂದ   ಪ್ರಧಾನ ಮಂತ್ರಿ  ನರೇಂದ್ರ ಮೋದಿ ಭೇಟಿ

Spread the love

ಸಂಸದ ನಳಿನ್ ಕುಮಾರ್ ಕಟೀಲ್ ರಿಂದ   ಪ್ರಧಾನ ಮಂತ್ರಿ  ನರೇಂದ್ರ ಮೋದಿ ಭೇಟಿ

ಮಂಗಳೂರು: ಪ್ರಧಾನಮಂತ್ರಿಗಳ ಆಶಯ ಯೋಜನೆಯಾದ ಮುದ್ರ ಮತ್ತು ಜನಧನ್ ಯೋಜನೆಗಳು ಅತ್ಯತ್ತಮವಾಗಿ ಅನುಷ್ಠಾಗೊಂಡ ಜಿಲ್ಲೆ ದಕ್ಷಿಣ ಕನ್ನಡ, ಈ ಜಿಲ್ಲೆಯಲ್ಲಿ  ಸುಮಾರು 1.12 ಲಕ್ಷ ಜನರಿಗೆ ರೂ. 1,600 ಕೋಟಿ ಸಾಲಕೊಟ್ಟು ಉದ್ದಿಮೆದಾರರನ್ನಾಗಿ ಪ್ರೋತ್ಸಾಹಿಸಿದ ಯೋಜನೆಯ ವರದಿಯನ್ನು ಸನ್ಮಾನ್ಯ ಪ್ರಧಾನಮಂತ್ರಿಗಳಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಹಸ್ತಾಂತರಿಸಿದರು.

ಸಂಸದರ ಈ ಕಾರ್ಯಕ್ಕೆ ಪ್ರಧಾನ ಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಪ್ರಧಾನಿಯವರು ಹಣಕಾಸು ಇಲಾಖೆಯ ಕಾರ್ಯದರ್ಶಿ ರಾಜೀವ್.ಕೆ.ಆರ್ ಇವರೊಂದಿಗೆ ಸಭೆ ನಡೆಸಿದರು. ಈ ಯೋಜನೆಯನ್ನು ಇಡೀ ದೇಶದಲ್ಲಿ ಈ ರೀತಿಯಾಗಿ ಅನುಷ್ಠಾನಿಸಿ ಮಾದರಿಯಾಗಿ ಮಾಡುವುದಕ್ಕೆ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಕೇಂದ್ರ ಸರಕಾರದ ಇನ್ನಿತರ ಯೋಜನೆಗಳನ್ನೂ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಹಣಕಾಸು ಇಲಾಖೆಯ ಕಾರ್ಯದರ್ಶಿ ರಾಜೀವ್.ಕೆ.ಆರ್ ಇವರ ನೇತೃತ್ವದಲ್ಲಿ ಸಭೆನಡೆಸಿ ಸಂಪೂರ್ಣ ಸಹಕಾರ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದರು. ಸಂಸದ ಈ ಕಾರ್ಯವೈಖರಿಗೆ ಪ್ರಧಾನಮಂತ್ರಿಗಳು ಹಾಗೂ ಹಣಕಾಸು ಇಲಾಖೆಯ ಅಧಿಕಾರಿಗಳು ಅಭಿನಂದಿಸಿದರು.

ಇದಲ್ಲದೇ ಸಂಸದರು ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಪಟ್ಟಂತೆ ಹೊಸ ಯೋಜನೆಗಳು ಮತ್ತು ಬಾಕಿಯಿರುವ ಯೋಜನೆಗಳ ಕುರಿತು  ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಸಂಸದರ ಮನವಿಗೆ ಸ್ಪಂಧಿಸಿದ ಪ್ರಧಾನಮಂತ್ರಿಗಳು ದಕ್ಷಿಣ ಕನ್ನಡ ಜಿಲ್ಲೆಯ ಹಾಗೂ ಜಿಲ್ಲೆಯ ಜನತೆಯ ಮೇಲೆ ನನಗೆ ಅತಿಯಾದ ಪ್ರೀತಿಯಿದೆ ಎಂದು ಪ್ರತಿಕ್ರಿಯಿಸಿದರು. ಮನವಿಯ ಬಗ್ಗೆ ತಕ್ಷಣ ಅಧಿಕಾರಿಗಳ ವಿಶೇಷ ಸಬೆ ಕರೆದು ಮುಂದಿನದಿನಗಳಲ್ಲಿ ಈ ಯೋಜನೆಗಳ ಅನುಷ್ಠಾನಕ್ಕೆ ಸಹಕರಿಸುವುದಾಗಿ ಹಾಗೂ ಅಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ಪ್ರಧಾನಮಂತ್ರಿಗಳು ತಿಳಿಸಿದರು.

ಮನವಿಯಲ್ಲಿನ ಬೇಡಿಕೆಗಳು :

  1. ದಕ್ಷಿಣ ಕನ್ನಡ ಜಿಲ್ಲೆಗೆ ಕೇಂದ್ರೀಯ ವಿಶ್ವವಿದ್ಯಾಲಯ (ಸೆಂಟ್ರಲ್ ಯುನಿವರ್ಸಿಟಿ)
  2. ದಕ್ಷಿಣ ಕನ್ನಡ ಜಿಲ್ಲೆಗೆ ಐ.ಟಿ ಪಾರ್ಕ್
  3. ದಕ್ಷಿಣ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಅಥವಾ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್
  4. ಮಂಗಳೂರಿನಲ್ಲಿರುವ ಮೀನೂಗಾರಿಕಾ ಕಾಲೇಜನ್ನು ಮೇಲ್ದರ್ಜೆಗೇರಿಸುವುದು ಸೇರಿದಂತೆ ಜಿಲ್ಲೆಗೆ ಮಂಜೂರಾಗಿ ಬಾಕಿ ಉಳಿದಿರುವ ಯೋಜನೆಗಳಿಗೆ ವೇಗ ನೀಡುವಂತೆ ಮನವಿ ಮಾಡಿದರು.

Spread the love