ಸಚಿವ ದಿನೇಶ್ ಗುಂಡೂರಾವ್ ವಿರುದ್ದ ಅವಹೇಳನಕಾರಿ ಬರಹ – ಬಿಜೆಪಿ ಮಾಜಿ ಕಾರ್ಪೋರೇಟರ್ ವಿರುದ್ದ ಪ್ರಕರಣ ದಾಖಲು

Spread the love

ಸಚಿವ ದಿನೇಶ್ ಗುಂಡೂರಾವ್ ವಿರುದ್ದ ಅವಹೇಳನಕಾರಿ ಬರಹ – ಬಿಜೆಪಿ ಮಾಜಿ ಕಾರ್ಪೋರೇಟರ್ ವಿರುದ್ದ ಪ್ರಕರಣ ದಾಖಲು

ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಬಿಜೆಪಿ ಮಾಜಿ ಕಾರ್ಪೋರೇಟರ್ ಶ್ವೇತಾ ಪೂಜಾರಿ ವಿರುದ್ದ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಮಂಗಳೂರು ನಗರ ಬಗ್ಗೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆಯಾದ ಸುಹಾಸ್ ಶೆಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ವೇತಾ ಪೂಜಾರಿ ಎಂಬ ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಮಾನ್ಯ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ ಗುಂಡುರಾವ್ ಇವರ ಭಾವ ಚಿತ್ರದ ಕೆಳಗಡೆ ಅವಹೇಳನಕಾರಿ ಪೋಸ್ಟ್, ಮಾಡಿರುವ ಆಧಾರದಲ್ಲಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 62/2025 ಕಲಂ. 353(2) ಭಾರತೀಯ ನ್ಯಾಯ ಸಂಹಿತೆ ಯಂತೆ ಪ್ರಕರಣ ದಾಖಲಿಸಿದ್ದು, ಸದ್ರಿ ಪ್ರಕರಣವನ್ನು ಮುಂದಿನ ತನಿಖೆಯ ಸಲುವಾಗಿ ಮಂಗಳೂರು ನಗರ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.

ಸದ್ರಿ ಪ್ರಕರಣದಲ್ಲಿ ತನಿಖೆ ಕೈಗೊಂಡು ಪ್ರಚೋದನಕಾರಿಯಾದ ಸಂದೇಶವನ್ನು ಫೇಸ್ ಬುಕ್ ಗ್ರೂಪ್ ನಲ್ಲಿ ಪೋಸ್ಟ್ ಮಾಡಿದ್ದ ಶ್ವೇತಾ ಪೂಜಾರಿ ಎಂಬವರನ್ನು ಪತ್ತೆ ಮಾಡಿದ್ದು ವಿಚಾರಣೆ ನಡೆಸಲಾಗುತ್ತಿದ್ದು, ತನಿಖೆ ಮುಂದುವರೆಸಲಾಗಿದೆ.


Spread the love
Subscribe
Notify of

0 Comments
Inline Feedbacks
View all comments