ಸನಾತನ ಧರ್ಮದ ವಿರುದ್ಧ ಉದಯನಿಧಿ ಸ್ಟಾಲಿನ್ ಅವರ ವಿಷಪೂರಿತ ಹೇಳಿಕೆ:ವಿಶ್ವ ಹಿಂದೂ ಪರಿಷದ್ ಖಂಡನೆ

Spread the love

ಸನಾತನ ಧರ್ಮದ ವಿರುದ್ಧ ಉದಯನಿಧಿ ಸ್ಟಾಲಿನ್ ಅವರ ವಿಷಪೂರಿತ ಹೇಳಿಕೆ:ವಿಶ್ವ ಹಿಂದೂ ಪರಿಷದ್ ಖಂಡನೆ

ತಮಿಳುನಾಡು ವಿಧಾನಸಭೆಯಂತಹ ಪವಿತ್ರ ಸದನದಲ್ಲಿ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಅತ್ಯಂತ ಕೀಳುಮಟ್ಟದ ಮತ್ತು ಪ್ರಚೋದನಾತ್ಮಕ ಹೇಳಿಕೆಯನ್ನು ವಿಶ್ವ ಹಿಂದೂ ಪರಿಷದ್ ತೀವ್ರವಾಗಿ ಖಂಡಿಸುತ್ತದೆ.ರಾಜಕೀಯ ಲಾಭಕ್ಕಾಗಿ ಕೋಟ್ಯಂತರ ಜನರ ನಂಬಿಕೆಯಾಗಿರುವ ಸನಾತನ ಧರ್ಮದ ನಿರ್ಮೂಲನೆಯ ಬಗ್ಗೆ ಮಾತನಾಡುವುದು ಸಂವಿಧಾನ ವಿರೋಧಿ ನಡವಳಿಕೆಯಾಗಿದ್ದು, . ಸದನದ ಗೌರವವನ್ನು ಕಾಪಾಡುವ ದೃಷ್ಟಿಯಿಂದ ಸನಾತನ ಧರ್ಮದ ವಿರುದ್ಧದ ಈ ವಿಷಪೂರಿತ ಮಾತುಗಳನ್ನು ವಿಧಾನಸಭೆಯ ಅಧಿಕೃತ ನಡಾವಳಿಗಳಿಂದ ಕೂಡಲೇ ತೆಗೆದುಹಾಕಲು ತಮಿಳ್ನಾಡು ಸರಕಾರಕ್ಕೆ ಆಗ್ರಹಿಸುತ್ತೇನೆ

ಇತಿಹಾಸದುದ್ದಕ್ಕೂ ಸನಾತನ ಧರ್ಮವನ್ನು ಅಳಿಸಲು ಹೊರಟ ಎಷ್ಟೋ ಶಕ್ತಿಗಳು ತಾವೇ ಅಳಿದು ಹೋಗಿವೆ, ಸನಾತನ ಧರ್ಮವು ಸೂರ್ಯನಂತೆ ಶಾಶ್ವತ ಮತ್ತು ಪ್ರಬಲವಾಗಿದ್ದು ಇಂತಹ ಹೇಳಿಕೆಗಳಿಂದ ಅದನ್ನು ಕುಗ್ಗಿಸಲು ಸಾಧ್ಯವಿಲ್ಲ.
ಸನಾತನ ಧರ್ಮವು ಕೇವಲ ಒಂದು ಆಚರಣೆಯಲ್ಲ, ಅದು ಈ ದೇಶದ ಜೀವಾಳ ಮತ್ತು ಸಂಸ್ಕೃತಿಯ ಪ್ರತಿಬಿಂಬ.
ತುಷ್ಟೀಕರಣ ರಾಜಕಾರಣದಿಂದ – ಕೇವಲ ಒಂದು ವರ್ಗದ ಮತಗಳ ಓಲೈಕೆಗಾಗಿ ಸನಾತನ ಧರ್ಮದ ವಿರುದ್ಧ ವಿಷ ಕಾರುವುದು ಹೇಡಿತನದ ಲಕ್ಷಣ. ಉದಯನಿಧಿ ಅವರ ಹೇಳಿಕೆಗಳು ಕೇವಲ ರಾಜಕೀಯ ಪ್ರೇರಿತವಲ್ಲ, ಅದು ಹಿಂದೂ ವಿರೋಧಿ ಮನಸ್ಥಿತಿಯ ದ್ಯೋತಕ. ಜಗತ್ತಿನ ಪ್ರಾಚೀನ ಧರ್ಮವನ್ನು ಅಳಿಸಲು ಈ ಹಿಂದೆಯೂ ಅನೇಕ ಆಕ್ರಮಣಕಾರರು ಪ್ರಯತ್ನಿಸಿ ವಿಫಲರಾಗಿದ್ದಾರೆ. ಸನಾತನ ಧರ್ಮದ ವಿರುದ್ಧ ಈ ರೀತಿ ಮಾತನಾಡುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪುವೆಲ್ ಪ್ರಕಟಣೆಯಲ್ಲಿ ತಿಳಿಸಿದರು.


Spread the love
Subscribe
Notify of

0 Comments
Inline Feedbacks
View all comments