ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಅಗತ್ಯ: ಎಸ್ಪಿ ಡಾ.ಅರುಣ್

Spread the love

ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಅಗತ್ಯ: ಎಸ್ಪಿ ಡಾ.ಅರುಣ್

ಉಡುಪಿ: ದೇಶದ ಕಾನೂನು ಹಾಗೂ ಸಾಮಾಜಿಕ ಭದ್ರತೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್, ಗೃಹ ರಕ್ಷಕರು ಸೇರಿದಂತೆ ವಿವಿಧ ರಕ್ಷಣಾ ಇಲಾಖೆಯಲ್ಲಿನ ಸಿಬ್ಬಂದಿಗಳು ತಾವು ಧರಿಸುವ ಸಮವಸ್ತ್ರಗಳಿಗೆ ಸಮಾಜದಲ್ಲಿ ಗೌರವ ತರುವ ಬದ್ಧತೆಯನ್ನು ಇರಿಸಿಕೊಳ್ಳಬೇಕು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ಹೇಳಿದ್ದಾರೆ.

ಉಡುಪಿ ಜಿಲ್ಲಾ ಗೃಹ ರಕ್ಷಕ ದಳ ಕಚೇರಿಯಲ್ಲಿ ಶುಕ್ರವಾರ ನಡೆದ ವಾರ್ಷಿಕ ಮೂಲ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ತರಬೇತಿಗಳಿಗೆ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡುತ್ತಿದ್ದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹಾಗೂ ಗೃಹ ರಕ್ಷಕ ದಳ ಸಮಾದೇಷ್ಟ ಎಸ್.ಟಿ. ಸಿದ್ದಲಿಂಗಪ್ಪ ಮಾತನಾಡಿ, ಇಲಾಖೆಯಲ್ಲಿ ನೀಡುವ ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅಗತ್ಯ ತರಬೇತಿ ಪಡೆದು ಕೊಳ್ಳಲು ಗೃಹ ರಕ್ಷಕರು ಹಾಗೂ ಗೃಹ ರಕ್ಷಕಿಯರು ಉತ್ಸುಕರಾಗಬೇಕು. ಜಿಲ್ಲಾ ಕಚೇರಿ ಹಾಗೂ ಜಿಲ್ಲೆಯಲ್ಲಿ ಗೃಹ ರಕ್ಷಕ ಇಲಾಖೆಗೆ ಕಾಯಕಲ್ಪನೀಡುವ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗಿದೆ ಎಂದರು.

ಜಿಲ್ಲಾ ಸೆಕೆಂಡ್ ಇನ್ ಕಮಾಂಡ್ ರಾಜೇಶ್ ಕೆ.ಸಿ. ಹಾಗೂ ಜಿಲ್ಲಾ ಸಿವಿಲ್ ಡಿಫೆನ್ಸ್ ಇಲಾಖೆಯ ಕಮಾಂಡಿಂಗ್ ಅಧಿಕಾರಿ ಡಾ.ವಿಜೇಂದ್ರ ರಾವ್ ಮಾತನಾಡಿದರು. ಜಿಲ್ಲಾ ತರಬೇತು ಅಧಿಕಾರಿ ಚಂದ್ರಕಾಂತ್ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಬೈಂದೂರು ಘಟಕಾಧಿಕಾರಿ ರಾಘವೇಂದ್ರ ಎನ್ ವಂದಿಸಿದರು. ಬ್ರಹ್ಮಾವರ ಘಟಕಾಧಿಕಾರಿ ಸ್ಟೀವನ್ ಪ್ರಕಾಶ್ ನಿರೂಪಿಸಿದರು.


Spread the love

Leave a Reply