Home Mangalorean News Kannada News ಸವಲತ್ತು ನೀಡಲು ವಿಳಂಬ ಆರೋಪ: ದ.ಕ.ಜಿಲ್ಲೆಯ ಸಹಾಯಕ ಆಯುಕ್ತರು, ತಹಶೀಲ್ದಾರ್‌ಗಳ ವಿರುದ್ಧ ಪ್ರಕರಣ ದಾಖಲು

ಸವಲತ್ತು ನೀಡಲು ವಿಳಂಬ ಆರೋಪ: ದ.ಕ.ಜಿಲ್ಲೆಯ ಸಹಾಯಕ ಆಯುಕ್ತರು, ತಹಶೀಲ್ದಾರ್‌ಗಳ ವಿರುದ್ಧ ಪ್ರಕರಣ ದಾಖಲು

Spread the love

ಸವಲತ್ತು ನೀಡಲು ವಿಳಂಬ ಆರೋಪ: ದ.ಕ.ಜಿಲ್ಲೆಯ ಸಹಾಯಕ ಆಯುಕ್ತರು, ತಹಶೀಲ್ದಾರ್‌ಗಳ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ದ.ಕ. ಜಿಲ್ಲೆಯ ಸೈನಿಕರ/ಮಾಜಿ ಸೈನಿಕರ/ಸ್ವಾತಂತ್ರ್ಯ ಹೋರಾಟಗಾರರಿಗೆ ಸರಕಾರ ದಿಂದ ದೊರಕಬೇಕಾದ ಸವಲತ್ತುಗಳನ್ನು ಒದಗಿಸಲು ನಿರ್ಲಕ್ಷ್ಯ ತೋರಿದ ದ.ಕ ಜಿಲ್ಲೆಯ ಎಲ್ಲಾ ಕಂದಾಯ ಉಪವಿಭಾಗಾಧಿಕಾರಿಗಳು ಮತ್ತು ಎಲ್ಲಾ ತಾಲೂಕು ತಹಶೀಲ್ದಾರ್‌ಗಳ ವಿರುದ್ಧ ಲೋಕಾಯುಕ್ತ ಪೊಲೀಸ್ ವಿಭಾಗವು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ಸ್ವಾತಂತ್ರ್ಯಯೋಧರು ಮತ್ತವರ ಅವಲಂಬಿತರು ಹಾಗೂ ಹುತಾತ್ಮ ಯೋಧರು ಮತ್ತು ಅವರ ಅವಲಂಬಿತರಿಗೆ ಸಂವಿಧಾನಾತ್ಮಕವಾಗಿ ನೀಡಬೇಕಾದ ಪರಿಹಾರವನ್ನು (ಜಮೀನು) ಕಲ್ಪಿಸುವಲ್ಲಿ ನಿರ್ಲಕ್ಷ್ಯ ಮತ್ತು ವಿಳಂಬ ಧೋರಣೆ ತೋರಿದ ಆರೋಪವು ಕೇಳಿ ಬಂದಿದೆ. ಸರಕಾರದಿಂದ ದೊರೆಯುವ ಸೌಲಭ್ಯಗಳನ್ನು ಸಕಾಲದಲ್ಲಿ ಕಲ್ಪಿಸಲು ವಿವಿಧ ಇಲಾಖೆಗಳಿಂದ ಪೂರಕ ಸ್ಪಂದನೆ ದೊರೆಯದ ಕಾರಣ ಇದು ಲೋಕಾಯುಕ್ತ ಕಾಯ್ದೆಯಡಿ ದುರಾಡಳಿತ ವ್ಯಾಪ್ತಿಗೆ ಒಳಪಡುವುದರಿಂದ ಲೋಕಾಯುಕ್ತ ಪೊಲೀಸ್ ವಿಭಾಗದಿಂದ ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಳ್ಳಲಾಗಿದೆ.

ಸರಕಾರದ ಆದೇಶಗಳು, ಸುತ್ತೋಲೆಗಳು ಹಾಗೂ ಕಾನೂನಿನ ಅನ್ವಯ, ನಿವೃತ್ತರಾದ ಯೋಧರಿಗೆ ಹಾಗೂ ಹುತಾತ್ಮ ಯೋಧರ ಅವಲಂಬಿತರಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ಅವರ ಅವಲಂಬಿತರಿಗೆ ನಿಯಮಾನುಸಾರ ಸರಕಾರದಿಂದ ದೊರೆಯಬೇಕಾದ ನಿವೇಶನವನ್ನು ನೀಡುವಂತೆ ಉಚ್ಛ ನ್ಯಾಯಾಲಯ ಹಾಗೂ ಸರ್ವೋಚ್ಛ ನ್ಯಾಯಾಲಯದ ಆದೇಶಗಳು ಇದ್ದರೂ ಸಹ, ಸರಕಾರಿ ನೌಕರರು ಕರ್ತವ್ಯ ಪ್ರಜ್ಞೆಯನ್ನು ಮರೆತು ನಿವೃತ್ತರಾದ ಯೋಧರಿಗೆ ಹಾಗೂ ಹುತಾತ್ಮ ಯೋಧರ ಅವಲಂಬಿತರಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ಅವರ ಅವಲಂಬಿತರಿಗೆ ನಿಯಮಾನುಸಾರ ಸರಕಾರದಿಂದ ದೊರೆಯಬೇಕಾದ ಸೌಲಭ್ಯಗಳನ್ನು ಹಾಗೂ ನಿವೇಶನವನ್ನು ನೀಡಲು ಯಾವುದೇ ಕ್ರಮಕೈಗೊಳ್ಳದೆ ತೊಂದರೆ ನೀಡುತ್ತಿರುವುದು ಕಂಡುಬಂದಿದೆ. ಸರಕಾರಿ/ ಸಾರ್ವಜನಿಕ ನೌಕರ/ಅಧಿಕಾರಿಗಳು ಭ್ರಷ್ಟಾಚಾರ ನಡೆಸುತ್ತಿರುವುದು ಹಾಗೂ ಕರ್ತವ್ಯಲೋಪ ಎಸಗುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಆದ್ದರಿಂದ ಜಿಲ್ಲೆಯ ಮಂಗಳೂರು ಮತ್ತು ಪುತ್ತೂರು ಉಪವಿಭಾಗಾಧಿಕಾರಿಗಳು, ಎಲ್ಲಾ ತಹಶೀಲ್ದಾರರ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಲಾಗಿದೆ ಎಂದು ಲೋಕಾಯುಕ್ತ ಪ್ರಕಟನೆ ತಿಳಿಸಿದೆ.


Spread the love

Exit mobile version