ಸಹಕಾರಿ ಬ್ಯಾಂಕ್ ಗಳು ಆರ್.ಬಿ.ಐ ವ್ಯಾಪ್ತಿಗೆ ಕೇಂದ್ರ ಸರಕಾರದ ಆದೇಶ : ಯಶ್ಪಾಲ್ ಸುವರ್ಣ ಸ್ವಾಗತ

Spread the love

ಸಹಕಾರಿ ಬ್ಯಾಂಕ್ ಗಳು ಆರ್.ಬಿ.ಐ ವ್ಯಾಪ್ತಿಗೆ ಕೇಂದ್ರ ಸರಕಾರದ ಆದೇಶ : ಯಶ್ಪಾಲ್ ಸುವರ್ಣ ಸ್ವಾಗತ

ಉಡುಪಿ: ದೇಶದ ಎಲ್ಲಾ ಸಹಕಾರಿ ಬ್ಯಾಂಕುಗಳು ಮತ್ತು ಬಹು ರಾಜ್ಯ ಸಹಕಾರಿ ಬ್ಯಾಂಕುಗಳನ್ನು ರಾಷ್ಟ್ರೀಕೃತ ಬ್ಯಾಂಕ್ಗಳಿಗೆ ಅನ್ವಯವಾಗುವಂತೆ ಆರ್ಬಿಐ ವ್ಯಾಪ್ತಿಗೆ ತರುವ ಸುಗ್ರೀವಾಜ್ಞೆ ಹೊರಡಿಸಿರುವ ಕೇಂದ್ರ ಸರಕಾರದ ಮಹತ್ವದ ನಿರ್ಧಾರವನ್ನು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ಸ್ವಾಗತಿಸಿದ್ದಾರೆ.

ಸಹಕಾರಿ ಬ್ಯಾಂಕುಗಳಿಗೆ ಶಕ್ತಿ ತುಂಬುವ ಉದ್ದೇಶದಿಂದ ರಾಷ್ಟ್ರೀಕೃತ ಬ್ಯಾಂಕಿನ ಸಮನಾಗಿ ವ್ಯವಹಾರ ನಡೆಸಲು ಪೂರಕ ಅವಕಾಶ ಕಲಿಸುವ ನಿಟ್ಟಿನಲ್ಲಿ ಸಹಕಾರಿ ಬ್ಯಾಂಕ್ಗಳನ್ನು ಆರ್ಬಿಐ ವ್ಯಾಪ್ತಿಗೆ ತರುವ ಮೂಲಕ ಹೊಸ ಚೈತನ್ಯ ತುಂಬಿದೆ.

ಕೇಂದ್ರ ಸರಕಾರದ ಈ ಆದೇಶದಿಂದ ದೇಶದ 1482 ನಗರ ಸಹಕಾರಿ ಬ್ಯಾಂಕುಗಳು ಮತ್ತು 58 ಬಹು ರಾಜ್ಯ ಸಹಕಾರಿ ಬ್ಯಾಂಕುಗಳು ಆರ್ಬಿಐ ವ್ಯಾಪ್ತಿಗೆ ಒಳಪಡಲಿದ್ದು, ಈ ಮಹತ್ವದ ನಿರ್ಧಾರವನ್ನು ಕೈಗೊಂಡ ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವರಾದ ನಿರ್ಮಲ ಸೀತಾರಾಮನ್, ಕೇಂದ್ರ ಸಚಿವರಾದ ಪ್ರಕಾಶ್ ಜಾವ್ಡೇಕರ್ ಹಾಗೂ ಕೇಂದ್ರ ಸಚಿವ ಸಂಪುಟದ ಸರ್ವರಿಗೂ ಅಭಿನಂದನೆ ಸಲ್ಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love