ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶ ರವಾನೆ: ಆರೋಪಿ ಸೆರೆ
ಮಂಗಳೂರು: ಸಮಾಜದ ಶಾಂತಿ ನೆಮ್ಮದಿಗೆ ಭಂಗವನ್ನುಂಟು ಮಾಡುವಂತಹ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ರವಾನಿಸುತ್ತಿದ್ದ ಆರೋಪದ ಮೇರೆಗೆ ಕಾರ್ಕಳ ತಾಲೂಕಿನ ಇರ್ವತ್ತೂರು ಗ್ರಾಮದ ಆಶಿಕ್ ಎಸ್. ಕೋಟ್ಯಾನ್ ಎಂಬಾತನನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆಗೆ ಸೆನ್ ಕ್ರೈಂ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
ಆರೋಪಿಯು ಇನ್‌ಸ್ಟಾಗ್ರಾಂನಲ್ಲಿ ನಮಗೆ ಯಾವುದೇ ರೀತಿಯ ಉತ್ತರಗಳು ಬೇಡ, ರಕ್ತಕ್ಕೆ ರಕ್ತವೇ ಉತ್ತರವಾಗಬೇಕು, ಜೀವಕ್ಕೆ ಜೀವವೇ ಬೇಕು ಎಂಬುದಾಗಿ ಸ್ಟೇಟಸ್ ಹಾಕಿದ್ದ. ಅದರಂತೆ ಆರೋಪಿಯನ್ನು ಬಂಧಿಸಲಾಗಿದೆ.
ಸಮಾಜದ ಸ್ವಾಸ್ಥ್ಯ ಕೆಡಿಸಲು ಪ್ರಯತ್ನಿಸುವ, ಶಾಂತಿ ನೆಮ್ಮದಿಗೆ ಭಂಗವನ್ನು ಉಂಟು ಮಾಡುವ ಪ್ರಚೋದನಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ವ್ಯಕ್ತಿಗಳ ಪತ್ತೆಗಾಗಿ ಈ ಹಿಂದೆ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಿಂದ ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ.