Home Mangalorean News Kannada News ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಆರೋಪಿಯ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಆರೋಪಿಯ ಬಂಧನ

Spread the love

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಆರೋಪಿಯ ಬಂಧನ

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದಲ್ಲಿ ಒಬ್ಬರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.

2025ರಲ್ಲಿ ಮಂಗಳೂರು ನಗರದಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಬಳಿಕದ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದಕ ಪೋಸ್ಟ್‌ಗಳನ್ನು ಹಂಚಿಕೊಂಡು ಪ್ರಚಾರ ಮಾಡಿರುವ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ.179/2025ರಲ್ಲಿ ಬಿ.ಎನ್.ಎಸ್. 2023ರ ಕಲಂ 353(1), 353(2), 61(2), 55 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ವೇಳೆ “TN-MADDY” ಎಂಬ ಖಾತೆಯಿಂದ ಕೋಮು ಪ್ರಚೋದಕ ಪೋಸ್ಟ್‌ಗಳನ್ನು ಹಂಚಿಕೊಂಡ ವ್ಯಕ್ತಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮೂಡುಬೆಳ್ಳೆ ಗ್ರಾಮದ ಪವನ್ ಆಚಾರ್ಯ (22), ತಂದೆ ಬಾಲಕೃಷ್ಣ ಎಂಬುದು ಪತ್ತೆಯಾಗಿದೆ.

ಈ ಹಿನ್ನೆಲೆಯಲ್ಲಿ ಮಾರ್ಚ್ 25, 2026ರಂದು ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಇದಲ್ಲದೆ, ಈ ಆರೋಪಿತನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆಯಲ್ಲಿ ಅ.ಕ್ರ.95/2025ರಲ್ಲಿ ಮತ್ತೊಂದು ಪ್ರಕರಣವೂ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


Spread the love

Exit mobile version