Home Mangalorean News Kannada News ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಕಾರುವ ಪೋಸ್ಟ್ – ಯತೀಶ್ ಪೆರುವಾಯಿ ವಿರುದ್ದ ಪ್ರಕರಣ ದಾಖಲು

ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಕಾರುವ ಪೋಸ್ಟ್ – ಯತೀಶ್ ಪೆರುವಾಯಿ ವಿರುದ್ದ ಪ್ರಕರಣ ದಾಖಲು

Spread the love

ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಕಾರುವ ಪೋಸ್ಟ್ – ಯತೀಶ್ ಪೆರುವಾಯಿ ವಿರುದ್ದ ಪ್ರಕರಣ ದಾಖಲು

ಮಂಗಳೂರು: ಪೆರುವಾಯಿ ಗ್ರಾಮದ ಯತೀಶ್ ಎಂಬಾತ ಫೇಸ್ ಬುಕ್ ನಲ್ಲಿ ನಿರಂತರವಾಗಿ ಇನ್ನೊಂದು ಸಮುದಾಯದ ವಿರುದ್ಧ ದ್ವೇಷ ಕಾರುವ ಪೋಸ್ಟ್ ಹಾಕುತ್ತಿದ್ದು, ಸಮಾಜದ ಅಶಾಂತಿಗೆ ಕಾರಣರಾಗುತ್ತಿರುವ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಯತೀಶ್ ಪೆರುವಾಯಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಬಂಟ್ವಾಳ ಪೆರುವಾಯಿ ಗ್ರಾಮದ ನಿವಾಸಿ ಯತೀಶ ಎಂಬಾತನು ʻʻಯತೀಶ್ ಪೆರುವಾಯಿʼʼ ಎಂಬ ಹೆಸರಿನ ಪೇಸ್ ಬುಕ್ ಖಾತೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ ೦3 ಪೋಸ್ಟ್ ಗಳನ್ನು ಪ್ರಸಾರ ಮಾಡಿರುವುದಾಗಿದೆ. ಸದ್ರಿ ಪೋಸ್ಟ್ ಗಳಿಂದಾಗಿ ವಿಭಿನ್ನ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಮೇ 31 ರಂದು ಅ.ಕ್ರ: 72/2025 ಕಲಂ: 353(2) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.


Spread the love

Exit mobile version