ಸಾರಿಗೆ ಇಲಾಖೆ : “ತಂಬಾಕು ನಿಯಂತ್ರಣ” ಕುರಿತು ಕಾರ್ಯಗಾರ

Spread the love

ಸಾರಿಗೆ ಇಲಾಖೆ : “ತಂಬಾಕು ನಿಯಂತ್ರಣ” ಕುರಿತು ಕಾರ್ಯಗಾರ

ಮಂಗಳೂರು : ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ದಕ್ಷಿಣ ಕನ್ನಡ ಇದರ ವತಿಯಿಂದ ಮಂಗಳೂರು ನಗರದ ಕೆ.ಎಸ್.ಆರ್.ಟಿ.ಸಿ. ಡಿಪ್ಪೋ ಆಡಳಿತ ವಿಭಾಗದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ “ತಂಬಾಕು ನಿಯಂತ್ರಣ ಮತ್ತು ಅಔಖಿPಂ 2003” ಕುರಿತು ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕೆ.ಎಸ್.ಆರ್.ಟಿ.ಸಿ. ವಿಭಾಗಿಯ ನಿಯಂತ್ರಣಾಧಿಕಾರಿ ದೀಪಕ್ ಕುಮಾರ್‍ರವರು ವಾಹನ ಚಾಲಕರು, ನಿರ್ವಾಹಕರು ಸೇರಿದಂತೆ ಸಾರಿಗೆ ಇಲಾಖೆಯ ಎಲ್ಲಾ ಸಿಬ್ಬಂದಿಗಳು ತಂಬಾಕು ಸೇವನೆಯ ದುಷ್ಪರಿಣಾಮಗಳನ್ನು ಅರಿತು ಅದರಿಂದ ವಿಮುಕ್ತಿ ಹೊಂದಬೇಕೆಂದು ತಿಳಿಸಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಡಾ. ಜಗನ್ನಾಥ್ ಪಿ. ಇವರು ಕೆ.ಎಸ್.ಆರ್.ಟಿ.ಸಿ. ಡಿಪ್ಪೋಗಳನ್ನು ತಂಬಾಕು ಮುಕ್ತಮಾಡಲು ತೆಗೆದುಕೊಳ್ಳಬೇಕಾದ ಕ್ರಮಗಳು ಮತ್ತು ತಂಬಾಕು ನಿಯಂತ್ರಣ ಕಾಯ್ದೆಯ ಕುರಿತು ವಿವರಿಸಿದರು.

ಮುಖ್ಯವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಒಂದಾದ ಬಸ್ಸು ನಿಲ್ದಾಣಗಳಲ್ಲಿ ಧೂಮಪಾನ ನಿಷೇದವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯನಿರ್ವಹಣಾಧಿಕಾರಿಯಾದ ಡಾ. ರಾಜೇಶ್ ಬಿ.ವಿ. ತಿಳಿಸಿದರು. ಮುಂದಿನ ದಿನಗಳಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯ ಉಲ್ಲಂಘನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೇಳಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿಗಳಾದ ಶ್ರುತಿ ಸಾಲ್ಯಾನ್, ವಿದ್ಯಾ ಕುಮಾರಿ ಹಾಗೂ ಕೆ.ಎಸ್.ಆರ್.ಟಿ.ಸಿ. ಡಿಪ್ಪೊ ವಿಭಾಗದ ಕಾರ್ಮಿಕ ಕಲ್ಯಾಣಾಧಿಕಾರಿ ಪ್ರೀಯಾ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


Spread the love