ಸಾವಯವ ತರಕಾರಿಗಳ ಸೇವನೆಯಿಂದ ಆರೋಗ್ಯ ಸ್ಥಿರ – ಶಾಸಕ ರಘುಪತಿ ಭಟ್

Spread the love

ಸಾವಯವ ತರಕಾರಿಗಳ ಸೇವನೆಯಿಂದ ಆರೋಗ್ಯ ಸ್ಥಿರ – ಶಾಸಕ ರಘುಪತಿ ಭಟ್

ಉಡುಪಿ : ಮನೆಯಲ್ಲಿಯೇ ತಯಾರಿಸಿದ ಸಾವಯವ ಗೊಬ್ಬರದಿಂದ ಬೆಳೆಯುವ ತರಕಾರಿಗಳ ಸೇವನೆಯಿಂದ ಆರೋಗ್ಯವು ಸ್ಥಿರವಾಗಿರುತ್ತದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು.

ಅವರು ಸೋಮವಾರ ಉಡುಪಿ ತಾಲೂಕು ಪಂಚಾಯತ್ನಲ್ಲಿ , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಇದರ ಸಹಯೋಗದಲ್ಲಿ ನಡೆದ ಪೋಷಣ್ ಮಾಸಾಚರಣೆ-ಸೆಪ್ಟೆಂಬರ್-2020 ಕರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಪೌಷ್ಟಿಕಾಂಶಯುಕ್ತ ಸಸಿಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ವಿತರಿಸಿ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು.

ಕೈತೋಟ, ತರಕಾರಿ ತೋಟವನ್ನು ಮನೆಯಲ್ಲಿಯೇ ಬೆಳೆಸಿದಲ್ಲಿ ಪೌಷ್ಟಿಕ ಆಹಾರಗಳನ್ನು ಸೇವಿಸಲು ಸಾಧ್ಯವಾಗುತ್ತದೆ. ಇಂದಿನ ಸಂದರ್ಭದಲ್ಲಿ ಮಾರುಕಟ್ಟೆಯಲ್ಲಿ ಸಿಗುವ ತರಕಾರಿಗಳಲ್ಲಿ ರಾಸಾಯನಿಕ ಮಿಶ್ರಣವಾಗಿದ್ದು, ಇದರಿಂದ ದೇಹದ ಮೇಲೆ ವ್ಯತಿರಿಕ್ತ ಪರಿಣಾಮಗಳು ಬೀರಬಹುದು ಎಂದರು.

ಕೋವಿಡ್ ಬಂದ ನಂತರ ಪೌಷ್ಟಿಕಾಂಶ ಆಹಾರದ ಮಹತ್ವ ಜನರಿಗೆ ತಿಳಿದಿದ್ದು, ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳು, ವಿದ್ಯಾರ್ಥಿಗಳು, ಸಣ್ಣ ಮಕ್ಕಳಿಗೆ ಪೌಷ್ಟಿಕ ಆಹಾರಗಳ ಮಹತ್ವವನ್ನು ಈ ಪೋಷಣ್ ಅಭಿಯಾನ್ನ ಮುಖಾಂತರ ನೀಡಲಾಗುವುದು ಎಂದು ಹೇಳಿದರು.

ತಾಲೂಕು ಪಂಚಾಯತ್ ಅಧ್ಯಕ್ಷೆ ಸಂಧ್ಯಾ ಕಾಮತ್, ಉಪಾಧ್ಯಕ್ಷ ಶರತ್ ಕುಮಾರ್, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಶಿಲ್ಪಾ ರವೀಂದ್ರ , ಕಾರ್ಯನಿರ್ವಾಹಣಾಧಿಕಾರಿ ಮೋಹನ್ ರಾಜ್ ಹಾಗೂ ವಿವಿಧ ಪಂಚಾಯತ್ ನ ಪಿ.ಡಿ.ಓಗಳು ಉಪಸ್ಥಿತರಿದ್ದರು. ಶಿಶು ಅಭಿವೃದ್ದಿ ಯೋಜನಾಧಿಕಾರಿ ವೀಣಾ ವಿವೇಕಾನಂದ್ ಸ್ವಾಗತಿಸಿ, ನಿರ್ವಹಿಸಿದರು.


Spread the love