ಸಿದ್ಧಗಂಗಾ ಶ್ರೀಗಳಿಗೆ ದೊರಕದ ಭಾರತ ರತ್ನ: ಉಡುಪಿ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ ಬೇಸರ

Spread the love

ಸಿದ್ಧಗಂಗಾ ಶ್ರೀಗಳಿಗೆ ದೊರಕದ ಭಾರತ ರತ್ನ: ಉಡುಪಿ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ ಬೇಸರ

ಉಡುಪಿ: ಕರ್ನಾಟಕದ ಪ್ರತಿಷ್ಠಿತ ಮಠಗಳಲ್ಲಿ ಶ್ರೇಷ್ಠ ಸ್ಥಾನದಲ್ಲಿರುವ ತುಮಕೂರಿನ ಸಿದ್ಧಗಂಗಾ ಮಠ ತನ್ನ ಸೇವೆಯಿಂದ ವಿಶ್ವದೆಲ್ಲೆಡೆ ಮನ್ನಣೆ ಪಡೆದಿದ್ದು ಮಠದ ಪಿಠಾಧೀಪತಿಗಳಾಗಿದ್ದ ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಡಾ.ಶಿವಕುಮಾರ ಮಹಾಸ್ವಾಮಿಗಳಿಗೆ ಕೇಂದ್ರ ಸರಕಾರ ಭಾರತ ರತ್ನ ನೀಡದೆ ಅವಮಾನಿಸಿದ್ದಕ್ಕೆ ಉಡುಪಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಯೋಗಿಶ್ ಶೆಟ್ಟಿ ಕೇಂದ್ರದ ವಿರುದ್ದ ಬೇಸರ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಪ್ರತಿಷ್ಠಿತ ಮಠಗಳಲ್ಲಿ ಶ್ರೇಷ್ಠ ಸ್ಥಾನದಲ್ಲಿರುವ ತುಮಕೂರಿನ ಸಿದ್ಧಗಂಗಾ ಮಠ ತನ್ನ ಸೇವೆಯಿಂದ ವಿಶ್ವದೆಲ್ಲೆಡೆ ಮನ್ನಣೆ ಪಡೆದಿದ್ದು ಮಠದ ಪಿಠಾಧೀಪತಿಗಳಾಗಿದ್ದ ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಡಾ.ಶಿವಕುಮಾರ ಮಹಾಸ್ವಾಮಿಗಳವರು, ಇಂದಿನ ಕಾಲದಲ್ಲಿ ಪವಾಡ ಎನ್ನುವಂತೆ 111 ವರ್ಷಗಳ ಕಾಲ ಬದುಕಿ ಈ ನಾಡಿನ ಅಮೂಲ್ಯ ಸೇವೆ ಮಾಡಿ, 4 ದಿನಗಳ ಹಿಂದಷ್ಟೇ ಲಿಂಗೈಕ್ಯರಾಗಿದ್ದಾರೆ.

ಡಾ.ಶಿವಕುಮಾರ ಮಹಾಸ್ವಾಮಿಗಳವರು ಸಿದ್ಧಗಂಗಾ ಮಠದ ಪೀಠಾಧಿಪತಿಗಳಾಗಿ, ಹಲವಾರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದಲ್ಲದೇ, ಬಡ ಮಕ್ಕಳಿಗಾಗಿ ಉಚಿತ ಪ್ರಸಾದ ನಿಲಯ ಆರಂಭಿಸಿ, ಹಳ್ಳಿ-ಹಳ್ಳಿಗೆ ಸಂಚರಿಸಿ ಭಿಕ್ಷೆಯೆತ್ತಿ ಸುಮಾರು 90 ವರ್ಷಗಳ ಕಾಲ ನಿರಂತರವಾಗಿ ಲಕ್ಷಾಂತರ ಶಾಲಾ ಮಕ್ಕಳಿಗೆ ಅಕ್ಷರ, ಅನ್ನ, ಆಶ್ರಯ ನೀಡಿದ್ದು ನಡೆದಾಡುವ ದೇವರು ಎಂದೇ ಪ್ರಖ್ಯಾತರಾಗಿದ್ದಾರೆ.

ಕೇಂದ್ರ ಸರ್ಕಾರದಿಂದ ಪದ್ಮವಿಭೂಷಣ, ಕರ್ನಾಟಕ ಸರ್ಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿಗೆ ಭಾಜನಾಗಿರುವ ಇವರಿಗೆ, ತಮ್ಮ ಜೀವಮಾನ ಸೇವಾ ಕಾರ್ಯಕ್ಕೆ ಕೇಂದ್ರ ಸರ್ಕಾರವೇ ಸ್ವಯಂ ಪ್ರೇರಿತವಾಗಿ ಭಾರತ ರತ್ನ ಪ್ರಶಸ್ತಿಯನ್ನು ನೀಡಬೇಕಾಗಿತ್ತು.

ಕರ್ನಾಟಕ ರಾಜ್ಯದಿಂದ ಈ ಕುರಿತ ಪ್ರಸ್ತಾವನೆಯನ್ನು ಸಲ್ಲಿಸಿದ್ದಾಗಿಯೂ ಹಾಗೂ , ಇತ್ತೀಚಿನ ವರ್ಷಗಳಲ್ಲಿ ಕರ್ನಾಟಕ ಹಾಗೂ ರಾಷ್ಟ್ರದ ಹಲವಾರು ಗಣ್ಯರು, ಸ್ವಾಮೀಜಿಯವರು, ವಿವಿಧ ಕ್ಷೇತ್ರದ ಪ್ರಮುಖರು ಈ ಕುರಿತು ಜ್ಯಾತ್ಯಾತೀತವಾಗಿ, ಪಕ್ಷಾತೀತವಾಗಿ ಸರ್ವರೂ ಸಿದ್ಧಗಂಗಾ ಡಾ.ಶಿವಕುಮಾರ ಸ್ವಾಮೀಜಿಯವರಿಗೆ ದೇಶದ ಅತ್ಯುನ್ನತ ಭಾರತ ರತ್ನ ಪ್ರಶಸ್ತಿಯನ್ನು ನೀಡಬೇಕೆಂದು ಕಾಲ-ಕಾಲಕ್ಕೆ ವಿವಿಧ ವೇದಿಕೆಗಳಲ್ಲಿ ವಿನಂತಿಸಿಕೊಂಡಾಗಲೂ ಸಹ ಇದೀಗ ಪ್ರಕಟಿಸಿದ ಭಾರತ ರತ್ನ ಪ್ರಶಸ್ತಿಯಲ್ಲಿ ಪೂಜ್ಯಶ್ರೀಗಳ ಹೆಸರಿಲ್ಲದಿರುವುದು ಬೇಸರದ ವಿಷಯವಾಗಿದೆ.

ತಮ್ಮ ಸೇವಾ ಕಾರ್ಯಗಳ ಮೂಲಕವೇ ಕೊಟ್ಯಾಂತರ ಜನರ ಹೃದಯಲ್ಲಿ ಶಾಶ್ವತವಾಗಿ ಸ್ಥಾನ ಪಡೆದುಕೊಂಡಿರುವ ಸಿದ್ಧಗಂಗಾ ಶ್ರೀಗಳಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡದೆ ಕೇಂದ್ರ ಸರ್ಕಾರ ಕರ್ನಾಟಕದ ಪಾಲಿಗೆ ತನ್ನ ಅಸಡ್ಡೆಯನ್ನು ತೋರಿದೆ. ಬಿಜೆಪಿಯ 17 ಸಂಸದರು ಸಹ ತಮ್ಮ ಬೇಜವಬ್ದಾರಿಯನ್ನು ತೋರಿದ್ದಾರೆ ಎಂದು ಉಡುಪಿ ಜಿಲ್ಲಾ ಜೆಡಿಎಸ್ ನ ಅಧ್ಯಕ್ಷರಾದ ಯೋಗೀಶ್.ವಿ.ಶೆಟ್ಟಿಯವರು ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ.


Spread the love