ಸಿವಿಲ್ ಸರ್ವಿಸಸ್ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ 

Spread the love

ಸಿವಿಲ್ ಸರ್ವಿಸಸ್ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ 

ಮಂಗಳೂರು : ಕಾಲೇಜು ಶಿಕ್ಷಣ ಇಲಾಖೆ ಮಂಗಳೂರು ವಲಯದ ಜಂಟಿ ನಿರ್ದೇಶಕರ ಕಛೇರಿಯ ಆಶ್ರಯದಲ್ಲಿ ರಥಬೀದಿಯ ಡಾ.ಪಿ.ದಯಾನಂದ ಪೈ-ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಕ್ಯಾರಿಯರ್ ಅಡ್ವ್ವಾನ್ಸ್‍ಮೆಂಟ್ ಮತ್ತು ಸಿವಿಲ್ ಸರ್ವಿಸಸ್ ಪರೀಕ್ಷೆಗಳ ಬಗ್ಗೆ ಒಂದು ದಿನದ ತರಬೇತಿ ಕಾರ್ಯಾಗಾರ ಪುರಭವನದಲ್ಲಿ ನಡೆಯಿತು.

ಅಪರ ಜಿಲ್ಲಾಧಿಕಾರಿ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ “ವಿದ್ಯಾರ್ಥಿಗಳು ಸಮಯದ ಬೆಲೆಯನ್ನು ಅರಿತು, ಸಮಯದ ಜೊತೆ ಖಚಿತ ಆಯ್ಕೆಯ ಗುರಿಯ ಕಡೆಗೆ ಆತ್ಮ ಬಲ ಹಾಗೂ ಬುದ್ಧಿ ಬಲದಿಂದ ಮುನ್ನಡೆದರೆ ಯಶಸ್ಸು ಕಟ್ಟಿಟ್ಟ ಬುತ್ತಿ” ಎಂದು ಹೇಳಿದರು.

ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಉದಯಶಂಕರ್ ಎಚ್. ಭವಿಷ್ಯದ ಉದ್ಯೋಗಾವಕಾಶಗಳ ಬಗ್ಗೆ ವಿವರಿಸಿದರು. ಪ್ಲೇಸ್‍ಮೆಂಟ್‍ಸೆಲ್ ನೋಡಲ್ ಅಧಿಕಾರಿ ಪ್ರೊ. ಎ. ನಾರಾಯಣ ಪ್ರಸಾದ್ ಪ್ರಸ್ತಾವನೆಗೈದರು. ರಥಬೀದಿ ಸರಕಾರಿ ಕಾಲೇಜಿನ ಪ್ರಾಂಶುಪಾಲರಾದ ರಾಜಶೇಖರ್ ಹೆಬ್ಬಾರ್ ಸಿ., ಸ್ವಾಗತಿಸಿದರು. ಕಾಲೇಜಿನ ಸ್ನಾತಕೋತ್ತರ ವಿಭಾಗದ ಪ್ಲೇಸ್‍ಮೆಂಟ್ ಸೆಲ್ ಸಂಯೋಜಕ ಕೃಷ್ಣಪ್ರಭಾ ವಂದಿಸಿದರು.

ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಪಾಂಡುರಂಗ ನಾಯಕ್ ಉಪಸ್ಥಿತರಿದ್ದರು. ಪಾಶ್ರ್ವನಾಥ ಪಲ್ಲಬಾವಿ ಅವರು ಬ್ಯಾಂಕಿಂಗ್ ಪರೀಕ್ಷೆಗಳ ಕುರಿತು ಹಾಗೂ ರಿತೇಶ್ ಅವರು ಐ.ಎ.ಎಸ್. ಮತ್ತು ಕೆ.ಎ.ಎಸ್. ಪರೀಕ್ಷೆಗಳ ಕುರಿತು ಮಾಹಿತಿ ನೀಡಿದರು. ಜಂಟಿ ನಿರ್ದೇಶಕರ ಕಛೇರಿಯ ಶ್ರೀಧರ ಮಣಿಯಾಣಿ ನಿರೂಪಿಸಿದರು. ಜಿಲ್ಲೆಯ ಉಪ್ಪಿನಂಗಡಿ, ಬೆಳ್ತಂಗಡಿ, ವಾಮದಪದವು, ವಿಟ್ಲ, ಬೆಳ್ಳಾರೆ ಹಾಗೂ ರಥಬೀದಿ ಕಾಲೇಜಿನಿಂದ ಕಾರ್ಯಾಗಾರದಲ್ಲಿ ಭಾಗವಹಿಸಿದರು.


Spread the love