ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಹೊಂದಿದ ಓರ್ವನ ಸೆರೆ

Spread the love

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಹೊಂದಿದ ಓರ್ವನ ಸೆರೆ

ಮಂಗಳೂರು: ನಗರದ ಸಾರ್ವಜನಿಕರಿಗೆ ಮಾದಕ ವಸ್ತುವಾದ ಎಂಡಿಎಂಎ ನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿರುತ್ತಾರೆ.

ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (Methylene dioxy methamphetamine) MDMA ನ್ನು ಮುಂಬೈಯಿಂದ ಅಕ್ರಮವಾಗಿ ಖರೀದಿಸಿ ಮಂಗಳೂರಿನಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಮಾಹಿತಿ ದೊರೆತ ಮಂಗಳೂರು ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಎಂಡಿಎಂಎ ಎಂಬ ಮಾದಕ ವಸ್ತವನ್ನು ಹೊಂದಿದ

ಮಹಮ್ಮದ್ ಶಾಫಿ (32) ಕಾಟಿಪಳ್ಳ ಸುರತ್ಕಲ್ ಮಂಗಳೂರು ಎಂಬಾತನನ್ನು ವಶಕ್ಕೆ ಪಡೆದುಕೊಂಡು ಅವರಿಂದ 90 ಗ್ರಾಂ ತೂಕದ ರೂ. 3,15,000/- ಮೌಲ್ಯದ ಬೆಲೆಬಾಳುವ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ. ಆರೋಪಿಯು ಮುಂಬೈಯಿಂದ ಈ ಮಾದಕ ವಸ್ತುವನ್ನು ತಂದು ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದನು. ಆರೋಪಿಯಿಂದ, ಮೊಬೈಲ್ ಫೋನ್, ಡಿಜಿಟಲ್ ತೂಕದ ಯಂತ್ರ, ಹಾಗೂ ನಗದು ಹಣವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಒಟ್ಟು ಮೌಲ್ಯ ರೂ. 3,20,500/- ಆಗಿರುತ್ತದೆ. ಆರೋಪಿಯು ಮಂಗಳೂರು ನಗರದಲ್ಲಿ ಹಲವು ವ್ಯಕ್ತಿಗಳಿಗೆ ಈ ಮಾದಕ ವಸ್ತುವಾದ ಎಂಡಿಎಂಎ ನ್ನು ಮಾರಾಟ ಮಾಡಿರುವ ಬಗ್ಗೆ ತಿಳಿದುಬಂದಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿಯುವುದು. ಆರೋಪಿಯನ್ನು ಹಾಗೂ ವಶಪಡಿಸಿಕೊಂಡ ಸೊತ್ತುಗಳನ್ನು ಮುಂದಿನ ಕ್ರಮಕ್ಕಾಗಿ ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಪೊಲೀಸ್ ಆಯುಕ್ತರಾದ  ಟಿ. ಆರ್ ಸುರೇಶ್, ಐ.ಪಿ.ಎಸ್, ಮಾನ್ಯ ಪೊಲೀಸ್ ಉಪ ಆಯುಕ್ತರಾದ (ಅಪರಾಧ & ಸಂಚಾರ)  ಉಮಾ ಪ್ರಶಾಂತ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಾಂತಾರಾಮ, ಪಿಎಸ್ಐ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.


Spread the love