ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಹೊಂದಿದ ಮೂವರು ಆರೋಪಿಗಳ ಸೆರೆ

Spread the love

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಹೊಂದಿದ ಮೂವರು ಆರೋಪಿಗಳ ಸೆರೆ

ಮಂಗಳೂರು: ನಗರದ ಸಾರ್ವಜನಿಕರಿಗೆ ಮಾದಕ ವಸ್ತುವಾದ (Methylene dioxy methamphetamine) MDMA ಮುಂಬೈಯಿಂದ ಖರೀದಿಸಿ ಮಂಗಳೂರಿಗೆ ತಂದು ಮಾರಾಟ ಮಾಡಲು ಯತ್ನಿಸುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಇಕಾನಾಮಿಕ್ & ನಾರ್ಕೋಟಿಕ್ ಠಾಣೆಯ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿರುತ್ತಾರೆ.

ಬಂಧಿತರನ್ನು ಸುರತ್ಕಲ್ ಚೊಕ್ಕಬೆಟ್ಟು ನಿವಾಸಿ ಮೊಹಮ್ಮದ್ ಶರೀಫ್ ಸಿದ್ದಿಕ್ (40), ಕಾಟಿಪಳ್ಳ ನಿವಾಸಿ ಮೊಹಮ್ಮದ್ ಶಾಫಿ @ ಚಪ್ಪಿ (33), ಕೈಕಂಬ ನಿವಾಸಿ ಮೊಹಮ್ಮದ್ ಅನಾಸ್ (27) ಎಂದು ಗುರುತಿಸಲಾಗಿದೆ

ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ (Methylene dioxy methamphetamine) MDMA ವನ್ನು ಮುಂಬೈಯಿಂದ ಅಕ್ರಮವಾಗಿ ಖರೀದಿಸಿ ಮಂಗಳೂರಿಗೆ ಐಷಾರಾಮಿ ಕಾರೊಂದರಲ್ಲಿ ತರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು- ಉಡುಪಿ ರಾಷ್ಟ್ರೀಯ ಹೆದ್ದಾರಿಯ ಮುಲ್ಕಿ ಬಳಿ ಕಾರನ್ನು ತಪಾಸಣೆ ಮಾಡಿದಾಗ (Methylene dioxy methamphetamine) MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಅವರಿಂದ ರೂ. 87,560/- ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು, 3 ಮೊಬೈಲ್ ಫೋನ್ ಗಳು, ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಐಷಾರಾಮಿ ಬಿಎಂಡಬ್ಲೂ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ನಿಷೇದಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್ ಗಳು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಬಿಎಂಡಬ್ಲೂ ಕಾರಿನ ಒಟ್ಟು ಮೌಲ್ಯ 51,12,560/- ಲಕ್ಷ ಆಗಬಹುದು. ಆರೋಪಿಗಳು ಮುಂಬೈಯಿಂದ ಅಕ್ರಮವಾಗಿ ಮಾದಕ ವಸ್ತುಗಳನ್ನು ಖರೀದಿಸಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಿ ಹಣ ಗಳಿಸಲು ಮಂಗಳೂರು ಕಡೆಗೆ ಬರುತ್ತಿದ್ದರು.

ಆರೋಪಿಗಳ ಪೈಕಿ ಮೊಹಮ್ಮದ್ ಶರೀಫ್ ಸಿದ್ದಿಕ್ ಎಂಬಾತನ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತುವನ್ನು ಹೊಂದಿದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಆರೋಪಿ ಮೊಹಮ್ಮದ್ ಶಾಫಿ @ ಚಪ್ಪಿ ಎಂಬಾತನ ವಿರುದ್ದ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಹೊಂದಿದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಆರೋಪಿ ಮೊಹಮ್ಮದ್ ಅನಾಸ್ ಎಂಬಾತನ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣವೊಂದು ದಾಖಲಾಗಿರುತ್ತದೆ.

ಪೊಲೀಸ್ ಆಯುಕ್ತರಾದ ಡಾ: ಹರ್ಷ ಐ.ಪಿ.ಎಸ್, ಪೊಲೀಸ್ ಉಪ ಆಯುಕ್ತರವರಾದ ಲಕ್ಷ್ಮಿ ಗಣೇಶ್, (ಅಪರಾಧ & ಸಂಚಾರ), ರವರ ಮಾರ್ಗದರ್ಶನದಲ್ಲಿ ಮಂಗಳೂರು ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಆರ್ ನಾಯ್ಕ್, ಪಿಎಸ್ಐಯವರಾದ ಕಬ್ಬಾಳ್ ರಾಜ್ ಮತ್ತು ಸಿಬ್ಬಂದಿಗಳು ಹಾಗೂ ಎಕಾನಾಮಿಕ್ ಮತ್ತು ನಾರ್ಕೋಟಿಕ್ ಪೊಲೀಸ್ ಠಾಣೆಯ ಪಿಎಸ್ಐ ಲತಾ ಮತ್ತು ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.


Spread the love