ಸಿಸಿಬಿ ಕಾರ್ಯಾಚರಣೆ: ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ವಾರಂಟ್ ಅಸಾಮಿಗಳಿಬ್ಬರ ಸೆರೆ

Spread the love

ಸಿಸಿಬಿ ಕಾರ್ಯಾಚರಣೆ: ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ವಾರಂಟ್ ಅಸಾಮಿಗಳಿಬ್ಬರ ಸೆರೆ

ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿರುತ್ತಾರೆ.

ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ವಿವಿಧ ಕಳವು, ಕೊಲೆಯತ್ನ, ಕಾರಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿದಂತೆ ಸುಮಾರು 23 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಮಂಜನಾಡಿ ನಿವಾಸಿ ಮೊಹಮ್ಮದ್ ಅಬ್ದುಲ್ ಫಯಾನ್(26) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಿಂದ ವಶಕ್ಕೆ ಪಡೆದುಕೊಳ್ಳಲಾಗಿರುತ್ತದೆ.

ಈತನು ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣೆಗಳಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಉಪ್ಪಿನಂಗಡಿ, ಕಡಬ ಪೊಲೀಸ್ ಠಾಣೆಗಳಲ್ಲಿನ ವಿವಿಧ ಕಡೆಗಳಲ್ಲಿ ಸರಕಾರಿ ಕಛೇರಿ, ಶಾಲೆ ಹಾಗೂ ಅಂಗಡಿಗಳಲ್ಲಿ ಕಳ್ಳತನ ನಡೆಸಿದ ಪ್ರಕರಣಗಳಲ್ಲಿ ಭಾಗಿಯಾಗಿರುವುದಲ್ಲದೇ ನ್ಯಾಯಾಂಗ ಬಂಧನದಲ್ಲಿದ್ದ ಸಮಯ ಕಾರಾಗೃಹದೊಳಗೆ ಇತರ ಖೈದಿಗಳಿಗೆ ಹಲ್ಲೆ ನಡೆಸಿರುವುದಲ್ಲದೇ ಜೈಲು ಸಿಬ್ಬಂದಿಯವರ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಗೆ ಯತ್ನ ನಡೆಸಿದ ಪ್ರಕರಣ ಸೇರಿದಂತೆ ಒಟ್ಟು 23 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದವನು ಸುಮಾರು 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು, ಈತನ ವಿರುದ್ದ ವಿವಿಧ ಪೊಲೀಸ್ ಠಾಣೆಗಳಲ್ಲಿನ ಪ್ರಕರಣಗಳಲ್ಲಿ ನ್ಯಾಯಾಲಯದ ಒಟ್ಟು 23 ವಾರಂಟ್ ಇರುತ್ತದೆ.

ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ/ಸಾಗಾಟದ ಒಟ್ಟು 10 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಡ್ರಗ್ಸ್ ಪೆಡ್ಲರ್ ಬಂಟ್ವಾಳ ನರಿಂಗಾನ ನಿವಾಸಿ ಮೊಯಿದ್ದೀನ್ ಹಫೀಸ್ @ ಆಬಿ, ಪ್ರಾಯ(47) ಎಂಬಾತನನ್ನು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮೀಂಜ ಎಂಬಲ್ಲಿಂದ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.

ಈತನು ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಕೊಣಾಜೆ, ಉಳ್ಳಾಲ, ಮಂಗಳೂರು ಉತ್ತರ, ಸೆನ್ ಕ್ರೈಂ ಪೊಲೀಸ್ ಠಾಣೆ, ಸುರತ್ಕಲ್, ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ದ್ರವ್ಯ ಸಾಗಾಟ ನಡೆಸಿದ ಒಟ್ಟು 10 ಪ್ರಕರಣ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದವನು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದಲ್ಲದೇ ಇತ್ತೀಚೆಗೆ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾದ ಮಾದಕ ವಸ್ತು ಸಾಗಾಟ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದನು. ಈತನ ವಿರುದ್ದ ವಿವಿಧ ಪೊಲೀಸ್ ಠಾಣೆಗಳಲ್ಲಿನ ಪ್ರಕರಣಗಳಲ್ಲಿ ನ್ಯಾಯಾಲಯದ ಒಟ್ಟು 10 ವಾರಂಟ್ ಇರುತ್ತದೆ. ಆರೋಪಿಗಳಿಬ್ಬರನ್ನು ಮುಂದಿನ ಕ್ರಮಕ್ಕಾಗಿ ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.

ಮೇಲ್ಕಂಡ ಆರೋಪಿ ಪತ್ತೆ ಕಾರ್ಯವನ್ನು ಮಂಗಳೂರು ಪೊಲೀಸ್ ಆಯುಕ್ತರವರಾದ ಅನುಪಮ್ ಅಗರ್ ವಾಲ್, ಐ ಪಿ ಎಸ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಶರಣಪ್ಪ ಭಂಡಾರಿ ಹಾಗೂ ಸಿಸಿಬಿ ಸಿಬ್ಬಂದಿಯವರು ಭಾಗವಹಿಸಿರುತ್ತಾರೆ.


Spread the love