ಸಿಸಿಬಿ ಕಾರ್ಯಾಚರಣೆ: ಹೈಟೆಕ್ ವೇಶ್ಯಾವಾಟಿಕೆ ಜಾಲ ಪತ್ತೆ

Spread the love

ಸಿಸಿಬಿ ಕಾರ್ಯಾಚರಣೆ: ಹೈಟೆಕ್ ವೇಶ್ಯಾವಾಟಿಕೆ ಜಾಲ ಪತ್ತೆ

ಮಂಗಳೂರು : ನಗರದಲ್ಲಿ ಇಂಟರ್ನಟ್ ವೆಬ್ ಸೈಟ್ ಮೂಲಕ ವೇಶ್ಯಾವಾಟಿಕೆಗಾಗಿ ಯುವತಿಯರನ್ನು ಒದಗಿಸುತ್ತಿದ್ದ ಇಬ್ಬರು ಪಿಂಪ್ ಗಳನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಬಂಧಿತರನ್ನು ತೊಕ್ಕೊಟ್ಟು ನಿವಾಸಿ ಮಹಮ್ಮದ್ ರಫೀಕ್ (40) ಹಾಗೂ ಮಡಿಕೇರಿ ವಿರಾಜಪೇಟೆ ನಿವಾಸಿ ದೀಪಕ್ (43) ಎಂದು ಗುರುತಿಸಲಾಗಿದೆ.

ಮಂಗಳೂರು ನಗರದ ಕೆ.ಎಸ್ ರಾವ್ ರಸ್ತೆಯ ಲಾಡ್ಜ್ ವೊಂದನ್ನು ಕೇಂದ್ರಿಕರಿಸಿ ಇಂಟರ್ ನೆಟ್ ಮೂಲಕ ವೇಶ್ಯಾವಾಟಿಕೆಗಾಗಿ ಗ್ರಾಹಕರಿಗೆ ಯುವತಿಯರನ್ನು ಒದಗಿಸಿ ವ್ಯವಹಾರ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ಹಳೆ ಬಸ್ ನಿಲ್ದಾಣದ  ಬಳಿಯಿಂದ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ಆರೋಪಿಗಳು ಈ ಹೈಟೆಕ್ ವೇಶ್ಯಾವಾಟಿಕೆ ಧಂಧೆಯನ್ನು ನಡೆಸಲು ಇಂಟರ್ ನೆಟ್ ನಲ್ಲಿ http://m.locanto.in/mangalore/Women-Seeking-Men ಎಂಬ ಹೆಸರಿನಲ್ಲಿ ವೆಬ್ ಸೈಟ್ ನಲ್ಲಿ ಇವರ ಮೊಬೈಲ್ ನಂಬ್ರಗಳನ್ನು ನಮೂದಿಸಿ ಈ ಮೊಬೈಲ್ ನಂಬ್ರಗಳಿಗೆ ಕರೆ ಮಾಡಿದ ಗ್ರಾಹಕರಿಗೆ ಯುವತಿಯರನ್ನು ವೇಶ್ಯಾವಾಟಿಕೆಗಾಗಿ ನೀಡುತ್ತಿದ್ದರು.  ಆರೋಪಿಗಳ ವಶದಿಂದ 2 ಮೊಬೈಲ್ ಫೋನ್ ಗಳನ್ನು ಹಾಗೂ ನಗದು ರೂ. 12,500/- ಮತ್ತು ಆಟೋ ರಿಕ್ಷಾವೊಂದನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಮೌಲ್ಯ ರೂ. 1,64,500/- ಆಗಿರುತ್ತದೆ. ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ಉತ್ತರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.

ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಸುನೀಲ್ ವೈ ನಾಯಕ್ ಮತ್ತು ಪಿ.ಎಸ್.ಐ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿಗಳು  ಪತ್ತೆಕಾರ್ಯದಲ್ಲಿ  ಭಾಗವಹಿಸಿದ್ದರು.


Spread the love