ಸುಬ್ರಹ್ಮಣ್ಯ| ಕುಮಾರಧಾರ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು
ಕಡಬ: ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ನಡೆದಿದೆ.
ಮೃತ ಯುವಕರನ್ನು ಸುಳ್ಯ ತಾಲೂಕಿನ ಕೊಲ್ಲಮೊಗ್ರು ನಿವಾಸಿಗಳಾದ ಹರಿಪ್ರಸಾದ್ (37) ಹಾಗೂ ಸುಜಿತ್ (26) ಎಂದು ಗುರುತಿಸಲಾಗಿದೆ.
ಮೃತರಿಬ್ಬರೂ ಅವಿವಾಹಿತರಾಗಿದ್ದು, ತಮ್ಮ ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಕುಮಾರಧಾರ ನದಿಗೆ ಕುಲ್ಕುಂದ ಬಳಿ ಇಳಿದಿದ್ದು, ಈ ವೇಳೆ ಇಬ್ಬರು ನೀರಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ನೀರಲ್ಲಿ ಮುಳುಗಿದ ಇಬ್ಬರ ಮೃತದೇಹವನ್ನು ಮೇಲಕ್ಕೆತ್ತಲಾಗಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
