ಸುರತ್ಕಲ್ ಸಮುದ್ರದಲ್ಲಿ ಮೀನುಗಾರಿಕಾ ದೋಣಿ ಪಲ್ಟಿ: ಆರು ಮೀನುಗಾರರ ರಕ್ಷಣೆ

Spread the love

ಸುರತ್ಕಲ್ ಸಮುದ್ರದಲ್ಲಿ ಮೀನುಗಾರಿಕಾ ದೋಣಿ ಪಲ್ಟಿ: ಆರು ಮೀನುಗಾರರ ರಕ್ಷಣೆ

ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ ಸಮುದ್ರ ತೀರದ ಬಳಿ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಪಲ್ಟಿಯಾಗಿದ್ದು, ದೋಣಿಯಲ್ಲಿದ್ದ ಆರು ಮಂದಿ ಮೀನುಗಾರರನ್ನು ಸ್ಥಳೀಯ ಮೀನುಗಾರರು ಸಮಯೋಚಿತವಾಗಿ ರಕ್ಷಿಸಿದ ಘಟನೆ ನಡೆದಿದೆ.

ಮಾಹಿತಿಯ ಪ್ರಕಾರ, ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯಲ್ಲಿ ಒಟ್ಟು ಆರು ಮಂದಿ ಮೀನುಗಾರರು ಪ್ರಯಾಣಿಸುತ್ತಿದ್ದರು. ಸುರತ್ಕಲ್ ಸಮುದ್ರ ವ್ಯಾಪ್ತಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬಿರುಸಿನ ಅಲೆಗಳ ಹೊಡೆತಕ್ಕೆ ದೋಣಿ ಪಲ್ಟಿಯಾಗಿದೆ.

ದೋಣಿ ಪಲ್ಟಿಯಾಗುತ್ತಿದ್ದಂತೆ ಅದರಲ್ಲಿದ್ದ ಎಲ್ಲಾ ಮೀನುಗಾರರು ಸಮುದ್ರಕ್ಕೆ ಬಿದ್ದಿದ್ದು, ಸ್ಥಳದಲ್ಲಿದ್ದ ಇತರ ಮೀನುಗಾರರು ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಿ ಅವರನ್ನು ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ.

ರಕ್ಷಿಸಲ್ಪಟ್ಟ ಎಲ್ಲಾ ಮೀನುಗಾರರು ಆಂಧ್ರಪ್ರದೇಶ ಮೂಲದವರಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಘಟನೆಯಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯ ಮೀನುಗಾರರ ಸಮಯೋಚಿತ ಕಾರ್ಯಾಚರಣೆಯಿಂದ ಸಂಭವಿಸಬಹುದಾಗಿದ್ದ ಅನಾಹುತ ತಪ್ಪಿದೆ.


Spread the love
Subscribe
Notify of

0 Comments