ಸುಳ್ಯ | ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿ ಬಂಧನ

Spread the love

ಸುಳ್ಯ | ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿ ಬಂಧನ

ಸುಳ್ಯ: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕ ಪ್ರದೇಶದಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ದಿನಾಂಕ 30.03.2026 ರಂದು ನಡೆದ ಈ ಕಳವು ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 45/2026 ಕಲಂ 303(2) BNS-2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.

ತನಿಖೆಯ ಭಾಗವಾಗಿ ದಿನಾಂಕ 06.04.2026 ರಂದು ಸುಳ್ಯ ತಾಲೂಕಿನ ಕೆಮ್ರಾಜೆ ಎಲಿಮಲೆ ಪ್ರದೇಶದಲ್ಲಿ ಆರೋಪಿಯಾದ ಆಂಧ್ರಪ್ರದೇಶದ ಪಶ್ಚಿಮ ಗೊದಾವರಿ ನಿವಾಸಿ ಮಹಮ್ಮದ್ ಸಲ್ಮಾನ್ (35) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ ಕಳವು ಮಾಡಿದ ರೂ. 2,000 ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಮಾನ್ಯ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments