ಸುಳ್ಯ| ಲಾರಿ-ಕಾರು ನಡುವೆ ಭೀಕರ ಅಪಘಾತ; ಬಾಲಕ ಮೃತ್ಯು
ಸುಳ್ಯ: ಮಾಣಿ-ಮೈಸೂರು ಹೆದ್ದಾರಿಯ ಸುಳ್ಯದ ಗೂನಡ್ಕ ಶಾಲೆಯ ಬಳಿ ಲಾರಿ ಮತ್ತು ಕಾರು ಪರಸ್ಪರ ಢಿಕ್ಕಿಯಾಗಿ 10 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಅ.25ರಂದು ಮುಂಜಾನೆ ಸಂಭವಿಸಿದೆ.
ಕಾರಿನಲ್ಲಿ ಒಟ್ಟು ಐದು ಮಂದಿ ಪ್ರಯಾಣಿಸುತ್ತಿದ್ದು, ತನುಷ್ (10) ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡಿದ್ದ ವಿನುತ್ತಾಶ್ರಿ ಹಾಗು ರತ್ನ ಎಂಬುವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ. ಚಾಲಕ ನಾರಾಯಣ ಹಾಗೂ 4 ವರ್ಷದ ಹೆಣ್ಣು ಮಗು ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ.
ಅಪಘಾತವು ಚಾಲಕನ ನಿಯಂತ್ರಣ ತಪ್ಪಿ ಮಡಿಕೇರಿ ಕಡೆಯಿಂದ ಸುಳ್ಯದತ್ತ ಬರುತ್ತಿದ್ದ ಲಾರಿಗೆ ಪರಸ್ಪರ ಢಿಕ್ಕಿ ಆಗಿದೆ ಎಂದು ವರದಿಯಾಗಿದೆ. ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
