ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಮಂಗಳೂರು ನಗರದಲ್ಲಿ ನಿಷೇಧಾಜ್ಞೆ ಜಾರಿ

Spread the love

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಮಂಗಳೂರು ನಗರದಲ್ಲಿ ನಿಷೇಧಾಜ್ಞೆ ಜಾರಿ

ಮಂಗಳೂರು:  ಗುರುವಾರ ರಾತ್ರಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ ಕಲಂ: 163ರಲ್ಲಿ ಮೇ 2 ಬೆಳಿಗ್ಗೆ 6 ಘಂಟೆಯಿಂದ ಮೇ 6 ರ  ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆಯನ್ನು ಜಾರಿಗೆಗೊಳಿಸಿ ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ  ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು ಯಾ ಪದ ಹಾಡುವುದು, ಚೇಷ್ಟೆ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ, ಜಾಲತಾಣಗಳ ಮೂಲಕ ಪ್ರದರ್ಶನ ಯಾ ಪ್ರಸಾರ ಮಾಡುವುದು, ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಕೃತ್ಯ ಎಸಗುವುದು ಅಥವಾ ಕೃತ್ಯ ಎಸಗಲು ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಲಾಗಿದೆ.


Spread the love
Subscribe
Notify of

0 Comments
Inline Feedbacks
View all comments