ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ಐಎಗೆ ಹಸ್ತಾಂತರಿಸಲು ಕೇಂದ್ರ ಗೃಹಸಚಿವರಿಗೆ ಸಂಸದ ಕ್ಯಾ.ಚೌಟ ಪತ್ರ

Spread the love

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ಐಎಗೆ ಹಸ್ತಾಂತರಿಸಲು ಕೇಂದ್ರ ಗೃಹಸಚಿವರಿಗೆ ಸಂಸದ ಕ್ಯಾ.ಚೌಟ ಪತ್ರ

ಮಂಗಳೂರು: ಬಜ್ಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರವು ತತಕ್ಷಣವೇ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವರ್ಗಾಯಿಸಬೇಕೆಂದು ಒತ್ತಾಯಿಸಿ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಇಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

ಸುಹಾಸ್ ಶೆಟ್ಟಿ ಹತ್ಯೆ ಕರಾವಳಿ ಕರ್ನಾಟಕ ಪ್ರದೇಶದಲ್ಲಿ ಹೆಚ್ಚುತ್ತಿರುವ ಕಾನೂನುಬಾಹಿರತೆ, ರಾಷ್ಟ್ರ ವಿರೋಧಿ ಶಕ್ತಿಗಳ ಅಟ್ಟಹಾಸಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಈ ಹತ್ಯೆಯು ಕರಾವಳಿ ಮಾತ್ರವಲ್ಲ ಇಡೀ ರಾಜ್ಯದ ಜನರನ್ನೇ ಬೆಚ್ಚಿ ಬೀಳುವಂತೆ ಮಾಡಿದೆ ಎಂದು ಬ್ರಿಜೇಶ್ ಚೌಟ ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಹಿಂದೆಯೂ ಇದೇ ರೀತಿಯಲ್ಲಿ ಬಿಜೆಪಿ ಕಾರ್ಯಕರ್ತರಾದ ಸುಳ್ಯದ ಪ್ರವೀಣ್ ನೆಟ್ಟಾರು ಹತ್ಯೆಯನ್ನು ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕರ್ತರು ನಡೆಸಿದ್ದರು. ಈ ಸಂಘಟನೆಯನ್ನು ಈಗಾಗಲೇ ಕೇಂದ್ರ ಸರ್ಕಾರ ನಿಷೇಧಿಸಿದೆ. ಇಷ್ಟಾಗಿಯೂ ಈಗ ಪ್ರವೀಣ್ ಮಾದರಿಯಲ್ಲೇ ಮತ್ತೊಬ್ಬ ಯುವಕ ತನ್ನ ಜೀವ ಕಳೆದುಕೊಂಡಿರುವ ಅತ್ಯಂತ ನೋವಿನ ವಿಚಾರ. ಈ ರೀತಿಯ ಹತ್ಯೆಯು ಈ ಪ್ರದೇಶದಲ್ಲಿ ಪಿಎಫ್ಐ ನಂತಹ ಮೂಲಭೂತವಾದಿ ಸಂಘಟನೆಗಳು ಇನ್ನೂ ಸ್ಲೀಪರ್ ಸೆಲ್ ನಂತೆ ಜೀವಂತವಾಗಿರುವುದನ್ನು ಸ್ಪಷ್ಟಪಡಿಸುತ್ತದೆ ಎಂದು ಆರೋಪಿಸಿರುವ ಸಂಸದ ಚೌಟ, ಈ ಪ್ರಕರಣದ ಸಮಗ್ರ ಮತ್ತು ನಿಷ್ಪಕ್ಷ ತನಿಖೆಯನ್ನು ಈ ಕೂಡಲೇ ಎನ್ಐಎಗೆ ಹಸ್ತಾಂತರಿಸಬೇಕೆಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಈ ಭೀಕರ ಘಟನೆಯಲ್ಲಿ ನಿಷೇಧಿತ ಪಿಎಫ್ಐ ಸಂಘಟನೆಯ ಕಾರ್ಯಕರ್ತರ ಕೈವಾಡದ ಸಾಧ್ಯತೆ ಇರುವುದರಿಂದ ಈ ಕುರಿತು ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗಿರುವುದು ಅತ್ಯಗತ್ಯ. ಈ ಕೊಲೆ ಕೃತ್ಯದ ಹಿಂದಿರುವ ಸಮಾಜ ಘಾತುಕ ಸಂಘಟನೆಗಳು, ಹತ್ಯೆ ಹಿಂದಿನ ಒಳಸಂಚು, ಇದರಲ್ಲಿ ಭಾಗಿಯಾದವರು ಹಾಗೂ ಕುಮ್ಮಕ್ಕು ನೀಡಿರುವ ದುಷ್ಟಶಕ್ತಿಯನ್ನು ಬುಡ ಸಮೇತ ಕಿತ್ತು ಹಾಕಬೇಕು. ಆ ಮೂಲಕ ಕಾನೂನಿಲ್ಲಿ ಇರುವ ಜನರ ವಿಶ್ವಾಸವನ್ನು ಮರುಸ್ಥಾಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸುಹಾಸ್ ಶೆಟ್ಟಿ ಹತ್ಯೆ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯಪ್ರವೇಶಿಸಿ, ಕೇವಲ ಅಪರಾಧಿಗಳು ಮಾತ್ರವಲ್ಲದೆ ಅವರಿಗೆ ಬೆಂಬಲ ನೀಡಿದ ಮತ್ತು ಹಣಕಾಸು ನೆರವು ನೀಡಿದ ಎಲ್ಲರನ್ನು ತ್ವರಿತವಾಗಿ ನ್ಯಾಯದ ಮುಂದೆ ತರಲು ಕ್ರಮ ಕೈಗೊಳ್ಳಬೇಕೆಂದು ಕ್ಯಾ.ಬ್ರಿಜೇಶ್ ಚೌಟ ವಿನಂತಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments