ಸೆ. 2: ಕೆಥೊಲಿಕ್ ಸಭಾ ವತಿಯಿಂದ ಮಣಿಪಾಲ ಆರೋಗ್ಯ ಕಾರ್ಡ್, ಪ್ರತಿಭಾ ಪುರಸ್ಕಾರ

Spread the love

ಸೆ. 2: ಕೆಥೊಲಿಕ್ ಸಭಾ ವತಿಯಿಂದ ಮಣಿಪಾಲ ಆರೋಗ್ಯ ಕಾರ್ಡ್, ಪ್ರತಿಭಾ ಪುರಸ್ಕಾರ

ಉಡುಪಿ: ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ವತಿಯಿಂದ ನೀಡಲಾಗುವ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡುಗಳ ವಿತರಣೆ, ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಪ್ಟೆಂಬರ್ 2 ರಂದು ಭಾನುವಾರ ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ಚರ್ಚ್ ಸಭಾಂಗಣದಲ್ಲಿ ಜರುಗಲಿದೆ.

ಅಂದು ಬೆಳಿಗ್ಗೆ 10 ಗಂಟೆಗೆ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ| ವಂ|ಡಾ| ಜೆರಾಲ್ಡ್ ಐಸಾಕ್ ಲೋಬೊ ಉದ್ಘಾಟಿಸಲಿದ್ದು, ಕರ್ನಾಟಕ ಲೋಕ ಸೇವಾ ಆಯೋಗದ ಸದಸ್ಯರಾದ ಡಾ|ರೊನಾಲ್ಡ್ ಅನಿಲ್ ಫೆರ್ನಾಂಡಿಸ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಜೋನ್ ಡಿ’ಸಿಲ್ವಾ ಫೌಂಡೇಶನ್ ಮುಂಬೈ ಇದರ ಅಧ್ಯಕ್ಷರಾದ ಜೋನ್ ಡಿ’ಸಿಲ್ವಾ, ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ಆಧ್ಯಾತ್ಮಿಕ ನಿರ್ದೇಶಕರಾದ ವಂ|ಫರ್ಡಿನಾಂಡ್ ಗೊನ್ಸಾಲ್ವಿಸ್, ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ಚರ್ಚ್ ಧರ್ಮಗುರುಗಳಾದ ವಂ|ಸ್ಟ್ಯಾನಿ ಬಿ ಲೋಬೊ, ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ನಿಕಟಪೂರ್ವ ಅಧ್ಯಕ್ಷರಾದ ವಲೇರಿಯನ್ ಆರ್. ಫೆರ್ನಾಂಡಿಸ್ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಜೋನ್ ಡಿ’ಸಿಲ್ವಾ ಫೌಂಡೇಶನ್ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ವ್ಯಾಪ್ತಿಯ ಪ್ರತಿಯೊಂದು ಚರ್ಚಿನಿಂದ 2017-18 ರ ಸಾಲಿನ ಎಸ್.ಎಸ್.ಎಲ್.ಸಿ., ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ತೋರಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು ಮತ್ತು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಗುವುದು. ಇದೇ ವೇಳೆ ಮಣಿಪಾಲ ಕೊಂಕಣಿ ಆರೋಗ್ಯ ಸುರಕ್ಷಾ ಕಾರ್ಡುಗಳನ್ನು ಸಹ ವಿತರಣೆ ಮಾಡಲಾಗುವುದು ಎಂದು ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ಅಧ್ಯಕ್ಷರಾದ ಆಲ್ವಿನ್ ಕ್ವಾಡ್ರಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love