ಸೆ.21ರಿಂದ ಶಾಲೆಗಳು ತೆರೆದರೂ ತರಗತಿಗಳು ನಡೆಯಲ್ಲ: ಸಚಿವ ಸುರೇಶ್‌ ಕುಮಾರ್‌

Spread the love

ಸೆ.21 ರಿಂದ ಶಾಲೆಗಳು ತೆರೆದರೂ ತರಗತಿಗಳು ನಡೆಯಲ್ಲ: ಸಚಿವ ಸುರೇಶ್‌ ಕುಮಾರ್‌

ಮೈಸೂರು: ಸೆಪ್ಟೆಂಬರ್‌ 21ರಿಂದ ಶಾಲೆಗಳು ತೆರೆಯಲಿವೆ. ಆದರೆ, ತರಗತಿಗಳು ನಡೆಯುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಗ್ರೀನ್‌ ಸಿಗ್ನಲ್‌ ಸಿಗುವವರೆಗೂ ತರಗತಿಗಳು ನಡೆಯುವುದಿಲ್ಲ. ಆದ್ದರಿಂದ ಸೆ.30ರೊಳಗೆ 1ರಿಂದ 10ನೇ ತರಗತಿ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಮುಗಿಯಬೇಕಿದೆ. ಏನಾದರೂ ಸಮಸ್ಯೆ ಆದರೆ, ಬಿಇಒ ಕ್ರಮಕೈಗೊಳ್ಳುತ್ತಾರೆ. ಹೀಗಾಗಿ, ಯಾವುದೇ ಸಮಸ್ಯೆ ಇದ್ದರೆ ಪೋಷಕರು ಬಿಇಒಗಳನ್ನು ಸಂಪರ್ಕಿಸಿ ಎಂದು ಹೇಳಿದರು.

ನಾನು ಹೋದ ಕಡೆಯಲ್ಲೆಲ್ಲ ಶಾಲೆ ಯಾವಾಗ ಶುರುವಾಗುತ್ತದೆ ಎಂದು ಮಕ್ಕಳು ಕೇಳುತ್ತಿದ್ದಾರೆ. ಆದರೆ, ಪೋಷಕರು ಮಾತ್ರ ಆತಂಕದಲ್ಲಿದ್ದಾರೆ. ಈ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಕೈಗೊಳ್ಳುವ ಜವಾಬ್ದಾರಿ ನಮ್ಮ ಇಲಾಖೆಯದ್ದಾಗಿದೆ ಎಂದರು.

ರಾಜ್ಯದಲ್ಲಿ ಸಿಎಂ ಬದಲಾವಣೆ ಸಂಬಂಧ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂತಹ ಯಾವುದೇ ಸಾಧ್ಯತೆಗಳು ರಾಜ್ಯದಲ್ಲಿ ಇಲ್ಲ. ಶೇ. 100ಕ್ಕೆ‌ ನೂರರಷ್ಟು ಯಡಿಯೂರಪ್ಪನವರೇ ಸಿಎಂ ಆಗಿರುತ್ತಾರೆ. ಸಚಿವ ಸಂಪುಟ ವಿಸ್ತರಣೆ ವಿಚಾರ ಅದು ಸಿಎಂ‌ ಪರಮಾಧಿಕಾರ. ಆ ಬಗ್ಗೆ ಅವರೇ ತೀರ್ಮಾನ ತೆಗೆದುಕೊಂಡು ಕ್ರಮ ಕೈಗೊಳ್ತಾರೆ ಎಂದು ಸ್ಪಷ್ಟಪಡಿಸಿದರು.


Spread the love